ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಮತ್ತು ಅಸ್ಪ್ಯಶ್ಯತೆ ನಿವಾರಣೆಯ ಬಗ್ಗೆ ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರ ಕಾರ್ಯಕ್ರಮ ಮಾ.12ರಂದು ಸುಳ್ಯ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು,ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್,ಮೊದಲಾದವರು ಉಪಸ್ಥಿತರಿದ್ದರು.
ನ್ಯಾಯವಾದಿ ಜಗದೀಶ್ ಹುದೆರಿ ವಿಚಾರ ಗೋಷ್ಟಿ ಮತ್ತು ಕಾರ್ಯಗಾರ ನಡೆಸಿಕೊಟ್ಟರು. ಅರ್ಷಿಯಾ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಕಾವ್ಯ ವಂದಿಸಿದರು.