ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ ಸಿಬ್ಬಂದಿವರ್ಗದವರು ಆಶ್ರಯದಲ್ಲಿ ಮಾ.21ರಂದು ನಡೆಯಲಿರುವ ಕಿರಿಯ ಬಾಲಕ ಮತ್ತು ಬಾಲಕಿಯರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉತ್ಕರ್ಷ ಸಹಕಾರ ಟ್ರೋಫಿ 2021ರ ಆಮಂತ್ರಣ ಪತ್ರಿಕೆ ಬಿಡುಗಡೆಯು ಮಾ. 15ರಂದು ನಡೆಯಿತು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ವಹಿಸಿದ್ದರು. ಪಂಜ ಪೈಂದೋಡಿ ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭವಾನಿಶಂಕರ ಪಾಲೋಳಿ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.
ವೇದಿಕೆಯಲ್ಲಿ ಸೋಮಶೇಖರ ನೇರಳ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹೊನ್ನಪ್ಪ ಕಮಿಲ, ಯಶವಂತ ಎ ಕೆ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಲೋಹಿತ್ ಎಣ್ಣೆ ಮಜಲು ಸ್ವಾಗತಿಸಿ ನಿರೂಪಿಸಿದರು. ಕುಸುಮಾಧರ ಕಕ್ಯಾನ ವಂದಿಸಿದರು.