ಪೇರಾಲು – ಅಂಬ್ರೋಟಿ ಜಾಗೃತಿ ಮಹಿಳಾ ವೇದಿಕೆಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 14ರಂದು ಆಚರಿಸಲಾಯಿತು.
ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಇಂದಿರಾ ರೈ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದಾ ಜಿ. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ವೇದಿಕೆಯ ಸದಸ್ಯರಿಗೆ ಆಟೋಟ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಊರಿನ ಹಿರಿಯ ನಾಟಿ ವೈದ್ಯೆ ಶ್ರೀಮತಿ ಮೀನಾಕ್ಷಿ ಸಂಕೇಶರವರನ್ನು ಸನ್ಮಾನಿಸಲಾಯಿತು. ಜಾ.ಮ.ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಶೀಲಾ ಸೊರoಜಾ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕಾಧ್ಯಕ್ಷೆ ಶ್ರೀಮತಿ ಯಶೋದಾ ಪೇರಾಲು, ಸ್ಥಾಪಕ ಕಾರ್ಯದರ್ಶಿ ಶ್ರೀಮತಿ ದಿವ್ಯಲತಾ ಚೌಟಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಸುಧಾ ಕೆ. ಸ್ವಾಗತಿಸಿ’ ದೀಪಿಕಾ ಅತ್ಯಾಡಿ ಕಾರ್ಯಕ್ರಮ ನಿರೂಪಿಸಿದರು.