ಕೋವಿಡ್-19 ಕೊರೊನಾ ಸೋಂಕು ಮತ್ತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಕೊರೊನಾ ಕಾರ್ಯಪಡೆ ಸದಸ್ಯರ ಸಭೆಯು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಾ.17ರಂದು ಜರುಗಿತು.
ನೂತನ ಗ್ರಾಮ ಪಂಚಾಯತಿ ಸದಸ್ಯರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಗ್ರಾಮದಾದ್ಯಂತ ಅಂಗಡಿಗಳಲ್ಲಿ ಜನ ಗುಂಪು ಸೇರಿದಂತೆ, ಮಾಸ್ಕ್ , ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವಂತೆ ನಿರ್ಧರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಪಂಚಾಯತಿ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ಸುಮಿತ್ರ ಕುತ್ಯಾಳ, ಪ್ರೇಮಲತ ಪಂಜಿಗುಂಡಿ, ಶಾರದಾ ಉಗ್ಗಮೂಲೆ, ರವಿಚಂದ್ರ ಕಾಪಿಲ, ಇಬ್ರಾಹಿಂ ಕಾಸಿಂ, ಗ್ರಾಮದ ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಅರ್ಯಕರ್ತೆಯರು, ಸೇರಿದಂತೆ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.