Breaking News

ಮರ್ಕಂಜ : ಕಾವೂರು ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ಶ್ರಮದಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮರ್ಕಂಜ ಮತ್ತು ಗೋಳಿಯಡ್ಕ ಒಕ್ಕೂಟದ ಸದಸ್ಯರಿಂದ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪೂರ್ವತಯಾರಿಯಾಗಿ ಶ್ರಮದಾನ ಮಾಡುವ ಮೂಲಕ ಸ್ವಚ್ಛತೆ ಕಾರ್ಯ ನಡೆಸಿದರು. ದೇವಸ್ಥಾನದ ಸುತ್ತ ದಟ್ಟವಾಗಿ ಹಬ್ಬಿಕೊಂಡಿದ್ದ ಕಾಡುಗಿಡ, ಹುಲ್ಲನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಒಕ್ಕೂಟ ಅಧ್ಯಕ್ಷರಾದ ರಾಧಾಕೃಷ್ಣ ಅಂಗಡಿಮಜಲು, ಆದರ್ಶ ರೈ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಾಘವ ಕಂಜಿಪಿಲಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಮೋಹನರಾಮ್ ಸುಳ್ಳಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಚೆನ್ನಕೇಶವ ಗೌಡ ದೋಳ,ಒಕ್ಕೂಟ ವಲಯಧ್ಯಕ್ಷರಾದ ಭಾಸ್ಕರ್ ರಾವ್ ಚೆನ್ನಡ್ಕ, ಗುತ್ತಿಗಾರು ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ, ಸೇವಾಪ್ರತಿನಿಧಿ ರೋಹಿಣಿ, ಭಜನಾ ಮಂಡಳಿ ಅಧ್ಯಕ್ಷರಾದ ಯತೀಶ್ ಕಂಜಿಪಿಲಿ, ಸಹ ಅರ್ಚಕರಾದ ಸುಬ್ರಹ್ಮಣ್ಯ ನೆಲ್ಲಿತ್ತಾಯ ಹಾಗೂ ಒಕ್ಕೂಟ ಪಧಾಧಿಕಾರಿಗಳು, ಮತ್ತು ಸದಸ್ಯರು ಭಾಗವಹಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.