ಮಾ.27 ರಂದು ಬೆಳ್ಳಾರೆಯ ಇತಿಹಾಸ ಹೊಂದಿದ ಬಂಗ್ಲೆಗುಡ್ಡೆಯ ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ

Advt_Headding_Middle
Advt_Headding_Middle

 

ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ

ಕರ್ನಾಟಕ ರಾಜ್ಯ ಸರಕಾರ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಬೆಳ್ಳಾರೆ ಗ್ರಾಮ ಪಂಚಾಯತ್, ನೆಹರು ಯುವಕೇಂದ್ರ ಮಂಗಳೂರು ಇದರ ಸಹಭಾಗಿತ್ವದಲ್ಲಿ ಮಾ.27 ರಂದು ಬೆಳ್ಳಾರೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಮಾ. 24 ರಂದು ಅಮರಮುಡ್ನೂರು ಪಂಚಾಯತ್ ಸಭಾಂಗಣದಲ್ಲಿ ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದ ಸುಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮೂರು ತಾಲೂಕು ಕೇಂದ್ರಗಳಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಸುಳ್ಯ ತಾಲೂಕಿನ ಬೆಳ್ಳಾರೆ ಕೇಂದ್ರವನ್ನು ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯ ದ ಇತಿಹಾಸ ಹೊಂದಿರುವ ಪ್ರದೇಶ ಬೆಳ್ಳಾರೆಯ ಬಂಗ್ಲೆ ಗುಡ್ಡೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಮಾ. 27 ರಂದು ಬೆಳಗ್ಗೆ ಅದ್ದೂರಿಯ ಜಾಥಾದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಬಳಿಕ ಬಂಗ್ಲೆಗುಡ್ಡೆಯ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿರುವುದು. ದೇಶಭಕ್ತಿಗೀತೆ, ನಾಡಗೀತೆ, ರೈತಗೀತೆಯ ಮುಖಾಂತರ ಸಭೆಯು ಪ್ರಾರಂಭವಾಗಲಿದೆ.ಸಭೆಯಲ್ಲಿ ಸಚಿವರು , ಜಿಲ್ಲಾಧಿಕಾರಿಗಳು , ಸಹಾಯಕ ಕಮೀಷನರ್, ತಹಶೀಲ್ದಾರ್, ಸ್ಥಳೀಯ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿರುತ್ತಾರೆ. ಈ ಸಂದರ್ಭ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಮಡಿದ ವೀರ ಪುರುಷರನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುವುದು.ಹಿರಿಯ ಸಾಹಿತಿ , ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲರಿಂದ ಸ್ವಾತಂತ್ರ್ಯ ಚಳುವಳಿಯ ಕುರಿತು ಉಪನ್ಯಾಸ ಹಾಗೂ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಮಧ್ಯಾಹ್ನ ಭೋಜನದ ನಂತರ ಕನ್ನಡ ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಕಲಾ ತಂಡದವರಿಂದ ದೇಶಪ್ರೇಮ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನಡೆಯಲಿರುವುದು . ವೇದಿಕೆಯಲ್ಲಿ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ, ಬೆಳ್ಳಾರೆ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು, ಚೊಕ್ಕಾಡಿ ಸೊಸೈಟಿ ಅಧ್ಯಕ್ಷ ರಾಘವೇಂದ್ರ ಪುಳಿಮಾರಡ್ಕ, ಸಂಪನ್ಮೂಲ ವ್ಯಕ್ತಿ ಡಾ.ಪ್ರಭಾಕರ ಶಿಶಿಲ, ನೆಹರು ಯುವ ಕೇಂದ್ರದ ರಘುವೀರ್ ಉಪಸ್ಥಿತರಿದ್ದರು. ಈ ಸಂದರ್ಭ ದಲ್ಲಿ ತಾಲೂಕು ಆಡಳಿತ ಅಧಿಕಾರಿಗಳು ಮತ್ತು ಬೆಳ್ಳಾರೆ ಯುವಕ ಮಂಡಲದ ಪದಾಧಿಕಾರಿಗಳು, ಪಂಚಾಯತ್ ಪಿ.ಡಿ.ಒ. ಮತ್ತು ಸದಸ್ಯರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಒಂದು ದಿನದ ಐತಿಹಾಸಿಕ ಕಾರ್ಯಕ್ರಮದ ಸಂಪೂರ್ಣ ಚಿತ್ರಣವನ್ನು ಎ.ಸಿ ಯವರು ಸಭೆಗೆ ತಿಳಿಸಿದರು. ತಾಲೂಕು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆಯನ್ನು ಮಾಡಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಎ.ಸಿ ಯವರು ವಿನಂತಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.