ಎನ್ಎಸ್ಯುಐ ಬೈಕ್ ರ್ಯಾಲಿ, ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ
ಎನ್ಎಸ್ಯುಐ ಬೈಕ್ ರ್ಯಾಲಿ, ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ರವರು ಮಾ. ೨೬ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಸುಳ್ಯಕ್ಕೆ ಬರುವ ಸಲೀಂ ಅಹ್ಮದ್ರವರು ಎನ್ಎಸ್ಯುಐ ವತಿಯಿಂದ ಸುಳ್ಯದಲ್ಲಿ ನಡೆಯುವ ಬೈಕ್ ರ್ಯಾಲಿಯಲ್ಲಿ ಭಾಗವಹಿಸುವರು. ಬೆಳಿಗ್ಗೆ ೧೧.೩೦ಕ್ಕೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯುವ ಯುವಕರ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ೪ ಗಂಟೆಗೆ ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.