ಕನಕಮಜಲು ಗ್ರಾಮ ಪಂಚಾಯತ್,ಮಂಗಳೂರಿನ ಪಡಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ “ಸ್ಥಳೀಯ ಸರಕಾರದ ಆಡಳಿತದಲ್ಲಿ ಮಕ್ಕಳು” (ಸ್ಥಳೀಯ ಸರಕಾರ ಮತ್ತು ಶಿಕ್ಷಣ ಹಕ್ಕು 2009 ) ಎಂಬ ವಿಷಯದಡಿಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರಿಗೆ ತರಬೇತಿ ಕಾರ್ಯಾಗಾರವು ಮಾ.26ರಂದು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗಿತು.
ಪಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಕಾಂತಿ ಸಂಪಾಜೆ, ಪಡಿ ಸಂಸ್ಥೆಯ ಡೆನ್ನೀಸ್ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಪ್ರೇಮಲತಾ ಪಂಜಿಗುಂಡಿ, ಶಾರದಾ ಉಗ್ಗಮೂಲೆ, ಸುಮಿತ್ರ ಕುತ್ಯಾಳ, ಇಬ್ರಾಹಿಂ ಕಾಸಿಂ ಕನಕಮಜಲು, ಕನಕಮಜಲು ಹಾಗೂ ಮಾಣಿಮಜಲು ಶಾಲಾ ಮುಖ್ಯೋಪಾಧ್ಯಾಯರುಗಳು ಸೇರಿದಂತೆ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.