ಸುಳ್ಯ ಇನ್ನರ್ ವೀಲ್ ಕ್ಲಬ್ ನವರು ಇಡ್ಯಡ್ಕ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ರೂಪಾಯಿ 5000 ಮೌಲ್ಯದ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಶ್ರೀಮತಿ ಜಯಮಣಿ ಮಾಧವ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಪೂಜಾ ಸಂತೋಷ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಕೆ,.ಎಸ್ ಡಿ. ಎಂ. ಸಿ ಅಧ್ಯಕ್ಷರಾದ ಹೇಮಂತಕುಮಾರ್, ಉಪಾಧ್ಯಕ್ಷೆ ಸುಧಾ ಕೆ. ಡಿ ಉಪಸ್ಥಿತರಿದ್ದರು. ಮುಖ್ಯ ಗುರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಸ್ವಾಗತಿಸಿ, ಸಹ ಶಿಕ್ಷಕಿ ಮಾನಸ ವಂದಿಸಿದರು. ಶಾಲಾ ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು,ಇನ್ನರ್ ವೀಲ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶ್ರೀಮತಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.