ಗುತ್ತಿಗಾರು ಪಂಚಾಯತ್‌ನಲ್ಲಿ ವಿವಿಧ ಕಾರ್ಯಕ್ರಮ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗುತ್ತಿಗಾರು ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಪೋಷಣ್ ಪಕ್ವಾಡ, ಒಂದು ವರ್ಷದಿಂದ ಎರಡು ವರ್ಷದೊಳಗಿನ ಹೆಣ್ಣು ಮಕ್ಕಳ ಶಿಶು ಪ್ರದರ್ಶನ, ಪೌಷ್ಠಿಕ ಆಹಾರ ಕಾರ್ಯಕ್ರಮದ ಅಂಗವಾಗಿ ಒಲೆರಹಿತ ಅಡುಗೆ ಸ್ಪರ್ಧೆ ಅಲ್ಲದೆ ಹಳ್ಳಿ ಮದ್ದಿನ ಗಿಡಗಳ ಪ್ರದರ್ಶನ ಕಾರ್ಯಕ್ರಮವನ್ನು ಗುತ್ತಿಗಾರು ಗ್ರಾಮಪಂಚಾಯತ್ ಗಿರಿಜನ ಸಭಾಭವನದಲ್ಲಿ ಮಾ.26  ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ಡಾ.ಚೈತ್ರ ಭಾನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಶ್ರೀಮತಿ ದೀಪಿಕಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಯವರಾದ ಶ್ರೀಮತಿ ಪದ್ಮವೇಣಿ , ಪೋಷಣ್ ಅಭಿಯಾನದ ಸಂಯೋಜಕರಾದ ಕು. ಪ್ರಮೀಳಾ ಎಸ್ ಹಾಗೂ ಸಹಾಯಕರಾದ ಶೋಭಿತ ಕೆ ಸಿ ರವರು ಉಪಸ್ಥಿತರಿದ್ದರ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಸ್ತ್ರೀಶಕ್ತಿ ಗುಂಪಿನ ಅಧ್ಯಕ್ಷರು ಸರ್ವ ಸದಸ್ಯರು, ಗುತ್ತಿಗಾರು ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು, ಗುತ್ತಿಗಾರು ಗ್ರಾಮ ಪಂಚಾಯತ್ ಮಟ್ಟದ ೯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ನಾಡಗೀತೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮವನ್ನು ಲತಾ ಅಂಬೆಕಲ್ಲು ಸ್ವಾಗತಿಸಿ ಶ್ರೀಮತಿ ಹೇಮಲತಾ ವಂದಿಸಿದರು ಕಾರ್ಯಕ್ರಮದ ಬಹುಮಾನ ಪ್ರಾಯೋಜಕರಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಚಾರ್ಮತ ಅವರು ನೀಡಿ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.