ಕಾರ್ಯಕ್ರಮದ ಜಾಥಾಕ್ಕೆ ಚಾಲನೆ
ದ.ಕ.ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸುಳ್ಯ ,ಬೆಳ್ಳಾರೆ ಗ್ರಾಮ ಪಂಚಾಯತ್ ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಜಾಥಾಕ್ಕೆ ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ಜಾಥಾಕ್ಕೆ ಚಾಲನೆ ನೀಡಿದರು.
ಜಾಥಾದಲ್ಲಿ ಇಲಾಖಾಧಿಕಾರಿಗಳು,ಶಾಲಾ ವಿದ್ಯಾರ್ಥಿಗಳು,ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಬೆಳ್ಳಾರೆ ಬಸ್ಟೆಂಡ್ ನಿಂದ ಮುಖ್ಯ ರಸ್ತೆ ಮೂಲಕ ಬಂಗ್ಲೆಗುಡ್ಡೆಯವರೆಗೆ ಜಾಥಾ ನಡೆಯಿತು.