ಜಯನಗರ ನಾರಾಜೆ ಪ್ರತಿಭಟನಾ ಸ್ಥಳಕ್ಕೆ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಅಧಿಕಾರಿಗಳ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಜಯನಗರ ನಾರಾಜೆ ಪರಿಶಿಷ್ಟ ಪಂಗಡದ ಕಾಲೋನಿಗೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟಿಕರಣ ಸ್ಥಳ ಬದಲಾವಣೆ ಗೊಂಡಿದೆ ಎಂದು ಇಂದು ಬೆಳಿಗ್ಗೆ ದಲಿತ ಹೋರಾಟ ಸಮಿತಿಯ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದರಿಂದ ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಂಡಿತ್ತು. ನಂತರ ಘಟನಾ ಸ್ಥಳಕ್ಕೆ ಸುಳ್ಯ ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ನ ಪಂ ಇಂಜಿನಿಯರ್ ಶಿವಕುಮಾರ್, ಸ್ಥಳೀಯ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೆರಿ ಭೇಟಿ ನೀಡಿ ಪ್ರತಿಭಟನಾ ನಿರತರನ್ನು ಸಮಾಧಾನಿಸುವ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಲೋನಿಯ ಸಮೀಪಕ್ಕೆ ತೆರಳಿ ಪ್ರತಿಭಟನಾಕಾರರು ಆಗ್ರಹಿಸುವ ಸ್ಥಳವನ್ನು ಪರಿಶೀಲನೆ ನಡೆಸಿದರು. ನಂತರ ಇದರ ಒಮ್ಮತದ ನಿರ್ಧಾರಕ್ಕೆ ಬರಲು ಸ್ಥಳೀಯ ಪಂಚಾಯತ್ ಸದಸ್ಯರು ಹಾಗೂ ದಲಿತ ಹೋರಾಟ ಸಮಿತಿಯ ಮುಖಂಡರನ್ನು ನಗರ ಪಂಚಾಯತ್ ಕಚೇರಿಗೆ ಬಂದು ಸರಿಯಾದ ನಿರ್ಧಾರ ಕೈಗೊಳ್ಳುವಂತೆ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಪತ್ರಿಕೆಗೆ ಹೇಳಿಕೆಯನ್ನು ನೀಡಿದ ದಲಿತ ಸಂಘಟನೆಯ ಮುಖಂಡರು ಯಾವುದೇ ರೀತಿಯಲ್ಲಿ ಇದೀಗ ಆರಂಭಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ನಾವು ಬಿಡುವುದಿಲ್ಲ. ಪರಿಶಿಷ್ಟ ಪಂಗಡದವರ ರಸ್ತೆ ಅಭಿವೃದ್ಧಿಗೆ ಬಂದ ಅನುದಾನವು ಸಮರ್ಪಕವಾಗಿ ನಾವು ಹೇಳುವ ರಸ್ತೆಯ ಬದಿಯಿಂದಲೇ ಆರಂಭಿಸಬೇಕೆಂದು ಆಗ್ರಹಿಸಿದ್ದಾರೆ. ಇದೀಗ ಮುಂದಿನ ಬೆಳವಣಿಗೆ ಏನಾಗಲಿದೆ ಎಂದು ಕಾದುನೋಡಬೇಕಾಗಿದೆ. ಈ ಮಧ್ಯದಲ್ಲಿ ಸ್ಥಳೀಯ ಇತರ ನಿವಾಸಿಗಳು ಈಗಾಗಲೇ ಹಗೆದುಹಾಕಿರುವ ರಸ್ತೆಯನ್ನು ಸರಿಪಡಿಸಿಕೊಡುವಂತೆ ಆಗ್ರಹಿಸಿ ಮತ್ತೊಂದು ಸಭೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.