ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ ಹಾಗೂ ಮಂಡೆಕೋಲು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಪೋಷಣ್ ಅಭಿಯಾನದ ಪೋಷಣ್ ಪಾಕ್ಷಿಕ ಕಾರ್ಯಕ್ರಮದಡಿ ಕಿಶೋರಿಯರಿಗೆ ಮತ್ತು ಮಹಿಳೆಯರಿಗೆ ಹಿಮೋಗ್ಲೋಬಿನ್ ಪರೀಕ್ಷೆ, ರಕ್ತಹೀನತೆ ಕುರಿತಂತೆ ಮಾಹಿತಿ ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಪೋಷಣ್ ಪಂಚಾಯತ್ ಕಾರ್ಯಕ್ರಮಗಳು ಅಮೃತ ಭವನ ಮಂಡೆಕೋಲು ಇಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀ ಮತಿ ವಿನುತಾ ವಹಿಸಿದ್ದರು .ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಿಝ್ವಾನ್ ರವರು ರಕ್ತಹೀನತೆ ಮತ್ತು ಅಪೌಷ್ಟಿಕತೆ ಕುರಿತಂತೆ ಮಾಹಿತಿ ನೀಡಿದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ.ಪೋಷಣ್ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಪೋಷಣ್ ಪಂಚಾಯತ್ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಅಪೌಷ್ಟಿಕ ಮಕ್ಕಳ ಕುರಿತಂತೆ ಚರ್ಚಿಸಲಾಯಿತು.ಪೌಷ್ಟಿಕ ಪುನರ್ವಸತಿ ಕೇಂದ್ರದ ಸೇವೆಗಳ ಬಗ್ಗೆ ತಿಳಿಸಲಾಯಿತು.ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಸರ್ಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮಂಡೆಕೋಲು ಇದರ ವಿದ್ಯಾರ್ಥಿನಿಯ ಪ್ರಾರ್ಥನೆಯೊಂದಿಗೆ ಪ್ರಾರಂಭ ವಾದ ಕಾರ್ಯಕ್ರಮದಲ್ಲಿ ವಲಯ ಮೇಲ್ವಚಾರಕಿ ಶ್ರಿಮತಿ ಶೈಲಜಾ.ಬಿ. ಎಲ್ಲರನ್ನೂ ಸ್ವಾಗತಿಸಿ ಶ್ರೀಮತಿ ಮೀನಾಕ್ಷಿ ಕಲ್ಲಡ್ಕ ವಂದಿಸಿದರು.ಶ್ರೀಮತಿ ವಾರಿಜಾ ಮಂಡೆಕೋಲು ಕಾರ್ಯಕ್ರಮ ನಿರೂಪಿಸಿದರು.ಬಳಿಕ ಶಾಲಾ ವಿದ್ಯಾರ್ಥಿಗಳ ಮತ್ತು ಮಹಿಳೆಯರ ಹಿಮೋಗ್ಲೋಬಿನ್ ಮಟ್ಟ ಪರಿಶೀಲನೆ ನಡೆಸಲಾಯಿತು. ಈ ಸಂದರ್ಬದಲ್ಲಿ ಉಚಿತ ಸ್ಥಳಾವಕಾಶ ಒದಗಿಸಿದ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಲಾಯಿತು.ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.