ಸುಳ್ಯ ನಗರಕ್ಕೆ ಪ್ರತ್ಯೇಕ ವಿದ್ಯುತ್ ಅಳವಡಿಸಬೇಕೆಂದು ರಿಯಾಝ್ ಕಟ್ಟೆಕ್ಕಾರ್‌ರಿಂದ ಮುಖ್ಯಮಂತ್ರಿಗಳಿಗೆ ಮನವಿ

Advt_Headding_Middle
Advt_Headding_Middle

 

ಸುಳ್ಯ ನಗರಕ್ಕೆ ಪ್ರತ್ಯೇಕ ವಿದ್ಯುತ್ ಅಳವಡಿಸಬೇಕೆಂದು ಸುಳ್ಯ ನಗರ ಪಂಚಾಯತ್ ಸದಸ್ಯ ರಿಯಾಝ್ ಕಟ್ಟೆಕ್ಕಾರ್‌ರವರು ಸುಳ್ಯ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.
ಸುಳ್ಯ ನಗರ ಕುಡಿಯುವ ನೀರಿನ ಘಟಕಕ್ಕೆ ಪ್ರತ್ಯೇಕ ಫೀಡರ್ ಅಳವಡಿಸುವಂತೆಯೂ ಅವರು ಮತ್ತೊಂದು ಮನವಿ ಮಾಡಿಕೊಂಡಿದ್ದಾರೆ.
ಸುಳ್ಯ ತಾಲೂಕಿಗೆ ಕೇವಲ ೩೩ ಕೆ.ವಿ. ವಿದ್ಯುತ್ ಸರಬರಾಜು ಇರುವುದರಿಂದ ಆಗಾಗ್ಗೆ ವಿದ್ಯುತ್ ಅಡಚಣೆ ಉಂಟಾಗುತ್ತಿದ್ದು, ಇದರಿಂದ ಸಣ್ಣ ಕೈಗಾರಿಕೆಗಳು, ವಾಣಿಜ್ಯೋದ್ಯಮಿಗಳು, ಆಸ್ಪತ್ರೆಗಳು ಹಾಗೂ ಇನ್ನಿತರ ಚಟುವಟಿಕೆಗಳಿಗೆ ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ನಗರ ಪ್ರದೇಶಕ್ಕೆ ಪ್ರತ್ಯೇಕ ಫೀಡರ್ ಅನಿವಾರ್ಯ. ಅಲ್ಲದೆ ವಿದ್ಯುತ್ ವ್ಯತ್ಯಯದಿಂದ ಸುಳ್ಯ ನಗರದಲ್ಲಿ ಕುಡಿಯುವ ನೀರಿನ ಪೂರೈಕೆಗೂ ಅಡಚಣೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಪಂಪ್ ಹೌಸ್‌ಗೆ ಪ್ರತ್ಯೇಕ ಫೀಡರ್ ಅಳವಡಿಸಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.