ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯದ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ವಲಯ ಮಟ್ಟದ ಸಭೆ ಎ. 5 ರಂದು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ ರೈ ಕಳೆ೦ಜ ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪಿ ರಾಜೀವ್ ರೈ ,ಪೆರುವಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗನ್ನಾಥ ಪೂಜಾರಿ , ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ,ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ , ಎಪಿಎಂಸಿ ಉಪಾಧ್ಯಕ್ಷ ರಾದ ನವೀನ್ ಸಾರಕೆರೆ ಉಪಸ್ಥಿತರಿದ್ದರು .
ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ರವರು ಮಾತನಾಡಿ ತಾಲೂಕಿನ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ವಲಯಮಟ್ಟದಲ್ಲಿ ನಡೆಸಬೇಕಾದ ಕಾರ್ಯಕ್ರಮದ ಬಗ್ಗೆ ತಿಳಿಸಿದರು . ಸಭೆಯಲ್ಲಿ ವಲಯದ ಜನಜಾಗೃತಿ ವೇದಿಕೆಗೆ ಪದಾಧಿಕಾರಿಗಳ ಸೇರ್ಪಡೆ ನವಜೀವನ ಸಮಿತಿ ಸದಸ್ಯರ ಬಲವರ್ಧನೆ ಹಾಗೂ ಗ್ರಾಮದಲ್ಲಿ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿ ರಚನೆ ಮಾಡುವಂತೆ ನಿರ್ಣಯಿಸಲಾಯಿತು . ಕಾರ್ಯಕ್ರಮದಲ್ಲಿ ಸೆವಾಪ್ರತಿನಿಧಿ ಶ್ರೀಮತಿ ಬೇಬಿ ಶಾಲಿನಿ ಪ್ರಾರ್ಥಿಸಿ, ಕಾರ್ಯಕ್ರಮದ ನಿರೂಪಣೆಯನ್ನು ವಲಯ ಮೇಲ್ವಿಚಾರಕರಾದ ಮುರಳೀಧರ ನಿರ್ವಹಿಸಿದರು . ಈ ಸಂದರ್ಭ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ವಲಯದ ಒಕ್ಕೂಟದ ಅಧ್ಯಕ್ಷರು ಹಾಗೂ ನವಜೀವನ ಸಮಿತಿ ಸದಸ್ಯರು ಭಾಗವಹಿಸಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.