ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕೆಳಗಿನ ಕುಂಜಾಡಿ ತರವಾಡು ಮನೆಯ ಧರ್ಮ ನೇಮೋತ್ಸವಕ್ಕೆ ಎ.8 ರಂದು ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದಾರೆ.
ಅಂದು ಅಪರಾಹ್ನ ಮಂಗಳೂರಿಗೆ ಆಗಮಿಸಲಿರುವ ಅವರು, ಸಂಜೆ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ಕಾರ್ಯಕ್ರಮ ಮುಗಿಸಿ ರಾತ್ರಿ 8.30 ಕ್ಕೆ ಕುಂಜಾಡಿಗೆ ಆಗಮಿಸಲಿದ್ದಾರೆ. 9.30 ಕ್ಕೆ ವಾಪಾಸ್ ಹೊರಟು
ಪುತ್ತೂರಿನಲ್ಲಿ ವಾಸ್ತವ್ಯ ಹೂಡಿ, ಎ.9 ರಂದು ಬೆಳಿಗ್ಗೆ ರಾಮಕುಂಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.