ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಬಿಸಿ ಟ್ರಸ್ಟ್ ಸುಳ್ಯ ವಲಯದ ಜನ ಜಾಗೃತಿ ಸಭೆಯು ಏ.6 ರಂದು ಧರ್ಮಸ್ಥಳ ಯೋಜನಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆಯಿತು.ವಲಯ ಅಧ್ಯಕ್ಷ ಸುರೇಶ್ ಕಣೆ ಮರಡ್ಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ಅಧ್ಯಕ್ಷ ಎನ್.ಎ.ರಾಮಚಂದ್ರ , ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾಲೂಕು ಅಧ್ಯಕ್ಷ ವಿಶ್ವನಾಥ ರೈ ಕಳಂಜ,ಮಂಡೆಕೋಲು ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು , ನ್ಯಾಯವಾದಿ ಎಂ. ವೆಂಕಪ್ಪ ಗೌಡ ಸುಳ್ಯ, ಪದ್ಮನಾಭ ಶೆಟ್ಟಿ, ಬೂಡು ರಾಧಾಕೃಷ್ಣ ರೈ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸಮಿತಿಗೆ ಸದಸ್ಯರ ಸೇರ್ಪಡೆಯ ಬಗ್ಗೆ ವಿಚಾರ ವಿಮರ್ಶೆ ಮಾಡಲಾಯಿತು. ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.
ನವಜೀವನ ಸಮಿತಿಯ ಸದಸ್ಯರು, ವಲಯದ ಸೇವಾಪ್ರತಿನಿಧಿ ಯವರು ಹಾಜರಿದ್ದರು.ಮೇಲ್ವಿಚಾರಕಿ ಉಷಾಕಲ್ಯಾಣಿ ಕಾರ್ಯಕ್ರಮ ನಿರೂಪಿಸಿದರು.