ದ.ಕ. ಜಿ.ಪಂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರ ಜಾಲ್ಸೂರು ಇದರ ವತಿಯಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೆ ಕೋವಿಡ್-19 ಚುಚ್ಚುಮದ್ದಿನ ಶಿಬಿರವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಎ.9ರಂದು ನಡೆಯಲಿದೆ.
ಬೆಳಿಗ್ಗೆ 9.30ರಿಂದ ಅಪರಾಹ್ನ 3 ಗಂಟೆಯವರೆಗೆ ಶಿಬಿರವು ನಡೆಯಲಿದ್ದು ಲಸಿಕೆ ಪಡೆಯಲು ಆಗಮಿಸುವ ಪ್ರತಿಯೊಬ್ಬರು ತಮ್ಮ ಆಧಾರ್ ಗುರುತಿನ ಚೀಟಿ ಮತ್ತು ಮೊಬೈಲ್ ಫೋನ್ ಕಡ್ಡಾಯವಾಗಿ ತರಬೇಕಾಗಿದೆ.