ಎ.14: ಪಂಜದಲ್ಲಿ ಅರ್ಧ ಏಕಾಹ ಭಜನೆ, ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ಪ್ರದರ್ಶನ

Advt_Headding_Middle
Advt_Headding_Middle

 

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಭಜನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಭಜನೋತ್ಸವ -2021 ಅರ್ಧ ಏಕಾಹ ಭಜನಾ ಕಾರ್ಯಕ್ರಮ (ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ) ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ , ಯಕ್ಷಗಾನ ಪ್ರದರ್ಶನ ಎ.14.ರಂದು ಪಂಜ ಶ್ರೀ ಶಾರದಾಂಬಾ ಭಜನಾ‌ ಮಂದಿರದಲ್ಲಿ ಜರುಗಲಿದೆ. ಮುಂಜಾನೆ
ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.ಸಂಜೆ ಸಮಾರೋಪ ಸಮಾರಂಭದಲ್ಲಿ ಭಜನೋತ್ಸವ ಸಮಿತಿ ಅಧ್ಯಕ್ಷ ಕುಸುಮಾಧರ ಕೆಮ್ಮೂರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಶಾರದಾ ಸಮಿತಿ ಪೂರ್ವಾಧ್ಯಕ್ಷ ಕೆ. ಕೃಷ್ಣ ವೈಲಾಯ, ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಾಕೆ ಮಾಧವ ಗೌಡ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಉಪಸ್ಥಿತರಿರುವರು. ಭಜನೋತ್ಸವದಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಕುಣಿತ ಭಜನೆ ಜರುಗಲಿದೆ. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರ ಕಲಾಕ್ಷೇತ್ರ ಪಂಜ ಇದರ ವಿದ್ಯಾರ್ಥಿಗಳಿಂದ ಗಿರೀಶ್ ಗಡಿಕಲ್ಲು ನಿರ್ದೇಶನದ ಶ್ರೀ ಕೃಷ್ಣಾ ಲೀಲಾಮೃತ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಎಂದು ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ‌ ಅವರು ತಿಳಿಸಿದ್ದಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.