Breaking News

ಸುಳ್ಯ ಎನ್ನೆಂಸಿಯ ವಿದ್ಯಾರ್ಥಿ ಜಿ.ರತನ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಆಯ್ಕೆ

Advt_Headding_Middle

ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ನಡೆಯಲಿರುವ ೬೮ನೇ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿ ಜಿ.ರತನ್ ಆಯ್ಕೆಯಾಗಿದ್ದಾರೆ.


 

ಇವರು ಕೆ.ವಿ.ಜಿ ಸ್ಪೋರ್ಟ್ಸ್ ಅಕಾಡೆಮಿ ಸುಳ್ಯ ಇಲ್ಲಿನ ಕಬಡ್ಡಿ ತಂಡದ ಆಟಗಾರನಾಗಿದ್ದು, ಸುಳ್ಯ ಎನ್ನೆಂಸಿಯಲ್ಲಿ ಕ್ರೀಡಾ ಕೋಟದಡಿ ಉಚಿತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈಗಾಗಲೇ ಹಲವಾರು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ ಹಾಗೂ ಕಬಡ್ಡಿ ತರಬೇತುದಾರ, ರಾಷ್ಟ್ರೀಯ ಕಬಡ್ಡಿ ಆಟಗಾರ ನಾಗರಾಜ್ ಜಿ.ನಾಯ್ಕ್ ತರಬೇತಿ ನೀಡುತ್ತಿದ್ದಾರೆ.

ರತನ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಲಗೋಡ್ ಗ್ರಾಮದ ದೈಹಿಕ ಶಿಕ್ಷಣ ಶಿಕ್ಷಕ ಗಣಪತಿ ನಾಯ್ಕ್ ಹಾಗೂ ಶ್ರೀಮತಿ ಚಂದ್ರಕಲಾ ದಂಪತಿ ಪುತ್ರ.

ವಿದ್ಯಾರ್ಥಿಯ ಕ್ರೀಡಾ ಸಾಧನೆಯನ್ನು ಸಂಸ್ಥೆಯ ಆಡಳಿತ ಮಂಡಳಿ, ಕೆ.ವಿ.ಜಿ ಸ್ಪೋರ್ಟ್ಸ್ ಅಕಾಡೆಮಿಯನ್ನು ಮುನ್ನಡೆಸುತ್ತಿರುವ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.