ಪಂಜ:  ಡಾ. ಬಿ.ಆರ್ ಅಂಬೇಡ್ಕರ್ ರವರ 130 ನೇ ಜನ್ಮದಿನಾಚರಣೆ

Advt_Headding_Middle

 

ಪಂಜ ಜೈ ಭೀಮ್ ಕಾರ್ಮಿಕ ಸಮಿತಿ, ಪಂಜ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಬೋಧಿಸತ್ವ , ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜನ್ಮದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಮಿಕ ಶಿಬಿರ ವು ಎ 14ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿಪೂರ್ಣಿಮ ದೇರಾಜೆ ಉದ್ಘಾಟಿಸಿದರು. ಕಾರ್ಮಿಕ ಸಮಿತಿಯ ಅಧ್ಯಕ್ಷ ಸುರೇಶ ಅಡ್ಡತೋಡು ಸಭಾಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜು ಉಪನ್ಯಾಸಕ ಡಾ. ಸೀತಾರಾಮ ಪಲ್ಲೋಡಿ ಮುಖ್ಯ ಭಾಷಣ ಮಾಡಿದರು.
ಮುಖ್ಯ ಅತಿಥಿಯಾಗಿ ದಕ್ಷಿಣ ಜಿಲ್ಲಾ ಎಸ್.ಟಿ/ ಎಸ್.ಸಿ ಕೈಗಾರಿಕೋದ್ಯಮಿಗಳ ಸಂಘ ದ ಮೋನಪ್ಪ ನಾಯ್ಕ ಸೌದಾಮಿನಿ .
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ, ಕಾರ್ಯದರ್ಶಿ ಕೆ ಪದ್ಮಯ್ಯ , ಕಾರ್ಮಿಕ ಸದಸ್ಯೆ ಶಮಿತಾ ಕೇನ್ಯ ಕೇನ್ಯ, ಗುತ್ತಿಗಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ದೇರಾಜೆ ಹಾಗೂ ಉಪನ್ಯಾಸಕರ ಡಾ’ ಸೀತಾರಾಮ ಪಲ್ಲೋಡಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಚನಿಯ ಪಂಜ ಸ್ವಾಗತಿಸಿದರು ಮತ್ತು ವಂದಿಸಿದರು.ಜೈ ಭೀಮ್ ಕಾರ್ಮಿಕ ಸಮಿತಿ ಸದಸ್ಯರು, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಪಾಲ್ಗೊಂಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.