ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾಗಿ ಡಾ. ಸುರೇಶ ವಿ. ನೇಮಕ

Advt_Headding_Middle
Advt_Headding_Middle

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಆಶ್ರಯದಲ್ಲಿರುವ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾಗಿ ಡಾ. ಸುರೇಶ ವಿ. ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ. ಯವರು ನೇಮಕಗೊಳಿಸಿದ್ದಾರೆ.
ಇವರು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕಳೆದ ೨೦ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಅಲ್ಲದೆ ಇವರು ಕಳೆದ ೧೦ ವರ್ಷಗಳಿಂದ ಕಾಲೇಜಿನ ಎನ್.ಎಸ್.ಎಸ್. ಮತ್ತು ಯೂತ್ ರೆಡ್ ಕ್ರಾಸ್ ಯೂನಿಟ್‌ನ ಸಂಯೋಜನಾಧಿಕಾರಿಯಾಗಿರುತ್ತಾರೆ. ಇವರು ತಮ್ಮ ಎಂ.ಟೆಕ್ ಪದವಿಯನ್ನು ಮೊದಲನೇ ರ್‍ಯಾಂಕ್ ಹಾಗೂ ಚಿನ್ನದ ಪದಕದೊಂದಿಗೆ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನಲ್ಲಿ ಪಡೆದಿರುತ್ತಾರೆ. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಣೆಗೊಂಡಿದೆ. ಇವರು ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಶ್ರೀಮತಿ ರಾಜಮ್ಮ ಮತ್ತು ಶ್ರೀ ಟಿ. ವೆಂಕಟೇಗೌಡ ದಂಪತಿಗಳ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್, ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ| ರೇಣುಕಾಪ್ರಸಾದ್ ಕೆ.ವಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್‌ರವರು ಅಭಿನಂದಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.