ಕೊರೋನಾ ನೆರಳು ; ಧಾರ್ಮಿಕ ಕಾರ್ಯಕ್ರಮ ಆಚರಣೆಗಳಿಗೆ ನಿರ್ಬಂಧ ಸರಿಯಲ್ಲ : ಪಿ.ಎಸ್.

Advt_Headding_Middle
Advt_Headding_Middle

ಕೊರೋನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರ್ಕಾರ ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಆಚರಣೆಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶ ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ.ಎಸ್.ಗಂಗಾಧರ್ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಮಾರು ಒಂದೂವರೆ ವರ್ಷದಿಂದ ಕೋವಿಡ್ ೧೯ ಎಂಬ ಮಹಾಮಾರಿಯ ಹೆಸರಿನಲ್ಲಿ ಅದೆಷ್ಟೋ ಜನರ ಜೀವನವನ್ನು ಬೇರೆ ಬೇರೆ ರೀತಿಯಲ್ಲಿ ಕಸಿದುಕೊಂಡಿರುವ ಸರಕಾರಗಳು, ಮದುವೆ ಇನ್ನಿತರ ಕಾರ್ಯಕ್ರಮಗಳ ಜೊತೆಗೆ ವಾರ್ಷಿಕವಾಗಿ ನಡೆಯುವ ನೇಮ ನಡಾವಳಿ, ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಿರುವುದು ಖಂಡನೀಯ. ವಿಪರ್‍ಯಾಸವೆಂದರೆ ರಾಜಕೀಯ ಕಾರ್ಯಕ್ರಮಗಳಿಗೆ ಅನುಮತಿ ನೀಡಿರುವುದು ಜನಸಾಮಾನ್ಯರಲ್ಲಿ ದ್ವಂದ್ವ ಮೂಡುವಂತಾಗಿದೆ. ಕೊರೋನಾ ೧೯ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಭಾಗವಹಿಸುವವರಿಗೆ ಮಾತ್ರ ತಗಲುವುದೇ? ರಾಜಕೀಯ ಸಭೆಯಲ್ಲಿ ಭಾಗವಹಿಸುವವರಿಗೆ ಕೂಡಾ ವಿನಾಯಿತಿ ನೀಡುವುದೇ? ಎಂಬ ಜಿಜ್ಞಾಸೆ ಮೂಡುವಂತಾಗಿದೆ. ಆದುದರಿಂದ ದಕ. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವರಾದ ಎಸ್.ಅಂಗಾರರವರು ರಾಜ್ಯ ಸರಕಾರಕ್ಕೆ ಒತ್ತಡ ಹೇರಬೇಕಾಗಿ ಪಿ.ಎಸ್.ಗಂಗಾಧರ್ ತಿಳಿಸಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.