ಪಂಜ: ವಿಶೇಷ ಚೇತನರಿಗೆ ವೀಲ್ ಚಯರ್ -ಮಂಚ ವಿತರಣಾ ಕಾರ್ಯಕ್ರಮ

Advt_Headding_Middle
Advt_Headding_Middle

 

ಪಂಜ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರಿಗೆ ವೀಲ್ ಚಯರ್ -ಮಂಚ ವಿತರಣಾ ಕಾರ್ಯಕ್ರಮ ಎ. 19 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ
ಸಚಿವ ಎಸ್ ಅಂಗಾರ ರವರು ವಿಶೇಷ ಚೇತನರಿಗೆ ಹಸ್ತಾಂತರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ
ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ್ ಪೂರ್ವಾಧ್ಯಕ್ಷ ಡಾ.ರಾಮಯ್ಯ ಭಟ್,
ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ
ಕಲ್ಲಾಜೆ , ಗ್ರಾಮ ಪಂಚಾಯತ್ ಸದಸ್ಯರಾದ ಬಿ ಲಕ್ಷ್ಮಣ ಗೌಡ ಬೊಳ್ಳಾಜೆ, ಜಗದೀಶ್ ಪುರಿಯ,ನಾರಾಯಣ ಕೃಷ್ಣನಗರ, ಶ್ರೀಮತಿ ವೀಣಾ ಪಂಜ, ಚಂದ್ರಶೇಖರ ದೇರಾಜೆ,ಶರತ್ ಕುದ್ವ, ಲಿಖಿತ್ ಪಲ್ಲೋಡಿ, ಶ್ರೀಮತಿ ಪ್ರತಿಮಾ ಸಂಪ, ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ , ಪೂರ್ವಾಧ್ಯಕ್ಫರಾದ ಲಿಗೋಧರ ಆಚಾರ್ಯ,ಕಾರ್ಯಪ್ಪ ಗೌಡ ಚಿದ್ಗಲ್ಲು,ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ನಿರ್ದೇಶಕ , ಮಂಗಳೂರು ಜನತಾ ಬಜಾರ್ ನಿರ್ದೇಶಕ ಚಿನ್ನಪ್ಪ ಗೌಡ ಚೊಟ್ಟೆಮಜಲು , ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ನಿರ್ದೇಶಕ ವಾಚಣ್ಣ ಕೆರೆಮೂಲೆ, ಸಿಬ್ಬಂದಿಗಳು,ಮೊದಲಾದವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸ್ವಂತ ನಿಧಿಯಿಂದ ವಿಶೇಷ ಚೇತನರಿಗೆ 5 ಮಂಚ ಮತ್ತು 1 ವೀಲ್ ಚಯರ್ ನೀಡಲಾಗಿದೆ.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಸ್ವಾಗತಿಸಿದರು ಮತ್ತು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.