ಕುಲ್ಕುಂದ : ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Advt_Headding_Middle
Advt_Headding_Middle

ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಎ. 19 ಮತ್ತು ಎ.2೦ ರಂದು ನಡೆಯಿತು.

ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರುರವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಜರಗಿದ್ದು, ಎ.19  ರ ಸಂಜೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆದು ಶುದ್ದಿಕಲಶ ಪೂಜೆ ನಡೆಯಿತು.

ಎ. ೨೦ ರ ಬೆಳಗ್ಗೆ ಗಣಪತಿ ಹವನ, ಶತರುದ್ರಾಭಿಷೇಕ, ಕಲಶಾಭಿಷೇಕ, ಮಹಾಪೂಜೆ ನಡೆದು, ಸಂಜೆ ದೀಪಾರಾಧನೆ, ಬಳಿಕ ತಾಯಾಂಬಕ, ರಂಗಪೂಜೆ ನಡೆಯಿತು. ರಾತ್ರಿ ಶ್ರೀ ಭೂತ ಬಲಿ, ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, ದರ್ಶನಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆದು ಮಂತ್ರಾಕ್ಷತೆ ನಡೆಯಿತು. ನೂರಾರು ಮಂದಿ ಭಕ್ತಾದಿಗಳು ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮನೋಹರ ನಾಳ, ಆಡಳಿತ ಮಂಡಳಿ ಕಾರ್ಯದರ್ಶಿ ನಾರಾಯಣ ಅಗ್ರಹಾರ, ವಿವಿಧ ಸಮಿತಿಗಳ ಪದಾಧಿಕಾರಿಗಳು ಕಾರ್ಯಕ್ರಮ ಯಶಸ್ವಿಯಲ್ಲಿ ಪಾಲ್ಗೊಂಡರು. ವಾರ್ಷಿಕೋತ್ಸವದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.