ಕೊರೋನಾ ನಿಯಂತ್ರಣ: ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

Advt_Headding_Middle

 

ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಮಳಿಗೆಗಳು ಬಂದ್

ದೇಶಾದ್ಯಂತ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು (ಎ.22) ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಆದೇಶ ಹೊರಡಿಸಿದೆ .

ಅಗತ್ಯ ಸೇವೆಗಳಾದ ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸೆಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಇತರ ಎಲ್ಲಾ ಸೇವೆಗಳನ್ನು ಮೇ 4ರವರೆಗೆ ಬಂದ್ ಗೊಳಿಸುವಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿರುವ ಸರಕಾರ ರಾಜ್ಯಾದ್ಯಂತ ಎ.21ರಿಂದ ರಾತ್ರಿ 9ರಿಂದ ಮೇ 4ರ ಬೆಳಗ್ಗೆ 6ರ ವರೆಗೆ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಸೇರಿದಂತೆ ನಿರ್ಬಂಧಗಳನ್ನು ಘೋಷಿಸಿದೆ. ಈ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.
ಎ.21ರಿಂದ ರಾಜ್ಯಾದ್ಯಂತ ಪ್ರತಿ ದಿನ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ. ನೈಟ್ ಕರ್ಪ್ಯೂ ರಾತ್ರಿ 9 ರಿಂದ ಬೆಳಗ್ಗೆ 6ರ ವರೆಗೂ ಇರಲಿದೆ. ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಪ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಈ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸ್ವಿಮ್ಮಿಂಗ್ ಫೂಲ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಯೋಗ ಕೇಂದ್ರ, ಜಿಮ್, ಕ್ರೀಡಾ ಸಂಕೀರ್ಣ, ಪಾರ್ಕ್, ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲಾಗುವುದು. ದೇವಸ್ಥಾನದಲ್ಲಿ ಅರ್ಚಕರಿಗಷ್ಟೇ ಅವಕಾಶ ನೀಡಲಾಗಿದೆ. ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಸಭೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಹಂತದ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಸೆಲೂನ್, ರೇಷನ್ ಅಂಗಡಿ, ಆಹಾರ, ತರಕಾರಿ, ದಿನಸಿ ಅಂಗಡಿ, ಬ್ಯಾಂಕ್, ಎಟಿಎಮ್, ಇನ್ಸೂರೆನ್ಸ್,ಕಚೇರಿ, ಇ-ಕಾಮರ್ಸ್, ಪೆಟ್ರೋಲ್ ಬಂಕ್‌ಗಳು ತೆರೆಯಲು ಅವಕಾಶವಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಂಚಾರ ನಿಷೇಧಿಸಲಾಗಿದೆ.

ಬಸ್, ಮ್ಯಾಕ್ಸಿ ಕ್ಯಾಬ್‌ಗಳಲ್ಲಿ ಶೇ.50ರಷ್ಟು ಅವಕಾಶ, ಸಾಧ್ಯವಾದಷ್ಟು ಕನಿಷ್ಠ ಸಿಬ್ಬಂದಿಗಳಿಗೆ ಅವಕಾಶ ನೀಡಿ ಎಲ್ಲಾ ಖಾಸಗಿ ಕಚೇರಿಗಳು, ಕಂಪೆನಿಗಳು, ಸಂಘಟನೆಗಳು ಕಾರ್ಯಾಚರಿಸಬಹುದು. ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಮದುವೆ ಸಮಾರಂಭಗಳಿಗೆ ಕೇವಲ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.