ಸವಣೂರು : ರಿಕ್ಷಾದಲ್ಲಿ ಅಕ್ರಮ ಮದ್ಯ ಸಾಗಾಟ

Advt_Headding_Middle
Advt_Headding_Middle

 

ರಿಕ್ಷಾ ಪೊಲೀಸ್ ವಶ – ಆರೋಪಿ ಪರಾರಿ

ಸವಣೂರಿನಲ್ಲಿ ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳನ್ನು ಮತ್ತು ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಮೇ.2 ರಂದು ನಡೆದಿದೆ.
ಆಟೋ ರಿಕ್ಷಾ ಚಾಲಕ ತಾರನಾಥ ಎಂಬವರು ಸರ್ವೆ ಕಡೆಗೆ ರಿಕ್ಷಾ ( KA 21B 7289) ದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಖರೀದಿ ಬಿಲ್ಲುಗಳನ್ನು ಹೊಂದದೆ ಮದ್ಯ ಬಾಟಲಿಗಳನ್ನು ಸಾಗಾಟ ಮಾಡುತ್ತಿರುವಾಗ ಸವಣೂರಿನಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ ಚಾಲಕ ಓಡಿ ಹೋಗಿ ತಪ್ಪಿಸಿಕೊಂಡಿದ್ದು ರಿಕ್ಷಾ ಹಾಗೂ ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಸವಣೂರಿನ ಬಾರ್ ಎಂಡ್ ರೆಸ್ಟೋರೆಂಟ್ ವೆಂಡರ್ ಮತ್ತು ರಿಕ್ಷಾ ಚಾಲಕನ ವಿರುದ್ದ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.