ಸುಳ್ಯ ಜ್ಯೋತಿ ಆಸ್ಪತ್ರೆಯ ವಠಾರ ಕಂಟೈನ್‌ಮೆಂಟ್ ಝೋನ್

Advt_Headding_Middle
Advt_Headding_Middle

 

ಸುಳ್ಯ ಜ್ಯೋತಿ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಒಬ್ಬ ಲ್ಯಾಬ್ ಟೆಕ್ನೀಷಿಯನ್‌ರಿಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ಆಸ್ಪತ್ರೆಯನ್ನು ಕಂಟೈನ್‌ಮೆಂಟ್ ಝೋನ್ ಎಂದು ಗುರುತಿಸಿ ಸೀಲ್‌ಡೌನ್ ಮಾಡಲಾಗಿದೆ. ಆಸ್ಪತ್ರೆಯ ಒಬ್ಬರು ವೈದ್ಯರಿಗೆ ಕೆಲ ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು.

ಬಳಿಕ ಆ ವೈದ್ಯರ ಮನೆಯವರಿಗೆ, ಮತ್ತೋರ್ವ ವೈದ್ಯರಿಗೆ ಮತ್ತು ಲ್ಯಾಬ್‌ಟೆಕ್ನೀಷಿಯನ್‌ಗೆ ಕೊರೋನಾ ಪಾಸಿಟಿವ್ ಬಂದಿದೆ.
ಈ ವೈದ್ಯರು ಕ್ವಾರೆಂಟೈನ್ ನಿಯಮ ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪ ಇಂದು ನಡೆದ ನ.ಪಂ. ಕೊರೋನಾ ಜಾಗೃತಿ ಸಭೆಯಲ್ಲಿ ಪ್ರಸ್ತಾಪವಾಯಿತು. ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಬೇಕೆಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.

ಈ ಹಿನ್ನಲೆಯಲ್ಲಿ ಕಂದಾಯ ಅಧಿಕಾರಿಗಳು, ನ.ಪಂ. ಅಧಿಕಾರಿಗಳು, ಆರೋಗ್ಯ ಇಲಾಖೆಯವರಿದ್ದು, ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.