ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ ಅಧಿಕಾರ ಸ್ವೀಕಾರ

Advt_Headding_Middle
Advt_Headding_Middle

 

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯ ಸರಕಾರದಿಂದ ನೇಮಕಗೊಂಡಿರುವ ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕರಾಗಿರುವ ಎಸ್. ಅಂಗಾರ ಅವರು ಮೇ.4ರಂದು ಚಿಕ್ಕಮಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಸ್ಥಳೀಯ ಆಡಳಿತದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಅಂಗಾರರು ಅಲ್ಲಿಂದ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.