Breaking News

ಅರಣ್ಯ ಇಲಾಖೆಯವರ ದೌರ್ಜನ್ಯದ ಆರೋಪ‌ – ಕಾನೂನು ಕ್ರಮಕ್ಕೆ ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷರ ಆಗ್ರಹ

Advt_Headding_Middle

 

 

ಕೊಲ್ಲಮೊಗ್ರು ಗ್ರಾಮದ ಮೋಹನ್ ಕೊಳಗೆ ಎಂಬ ಯುವಕನಿಗೆ ಅರಣ್ಯ ಇಲಾಖಾ ಅಧಿಕಾರಿಗಳು ಹಲ್ಲೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಆಗಬೇಕೆಂದು ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷ ಉದಯ ಕೊಪ್ಪಡ್ಕ ಆಗ್ರಹಿಸಿದ್ದಾರೆ.

ಅರಣ್ಯ ಅಧಿಕಾರಿಗಳಾದ ಅಪೂರ್ವ ಅಚ್ರಪ್ಪಾಡಿ ಹಾಗೂ ಪ್ರಕಾಶ್ ಅಗಸೀಮಣಿಯವರ ದೌರ್ಜನ್ಯದಿಂದ ಮೋಹನ್ ಕೊಳಗೆ ಅವರ ಕೈ ಕಾಲು ಮುರಿತಕ್ಕೊಳಗಾಗಿದೆ. ಅಲ್ಲದೆ ಖಾಲಿ ಪೇಪರ್ ಗೆ ಸಹಿ ಹಾಕಿಸಿಕೊಂಡು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದವರು ಆರೋಪಿಸಿದ್ದಾರೆ. ಕಾನೂನು ಪ್ರಕಾರ ನಡೆಯದೆ ಹರಳು ಕಲ್ಲು ಅಗೆತದವರಿಗೆ ಮಾಹಿತಿದಾರ ನಾಗಿ ಕೆಲಸ ಮಾಡುತ್ತಿರುವುದಾಗಿ ಆರೋಪಿ ಸಿ ಈ ರೀತಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ. ತಪ್ಪಿತಸ್ಥರಿಗೆ ಕಾನೂನು ರೀತಿಯ ಶಿಕ್ಷೆ ಆಗಬೇಕು. ನಾವು ಇದನ್ನು ತನಿಖೆ ನಡೆಸಲು ಆಗ್ರಹಿಸುವುದಾಗಿ ಅವರು ತಿಳಿಸಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.