Breaking News

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಕಾರ್ಯಪಡೆ ಸಭೆ

Advt_Headding_Middle

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಕಾರ್ಯಪಡೆ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾರವರ ಅಧ್ಯಕ್ಷತೆಯಲ್ಲಿ ಮೇ.7 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿಯವರು ಸ್ವಾಗತಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಕ್ವಾರಂಟೈನ್ ನಲ್ಲಿರುವವರ ವಿವರ ಮತ್ತು ಅಂಕಿ ಅಂಶ ಹಾಗೂ ಆ ಪ್ರದೇಶಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.


ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾರವರು ವ್ಯಾಕ್ಸಿನ್ ಪಡೆಯುವ ಬಗ್ಗೆ ಮತ್ತು ಕ್ವಾರಂಟೈನ್ ನಲ್ಲಿರುವವರು ನಿಯಮ ಪಾಲಿಸುವ ಬಗ್ಗೆ ಮಾಹಿತಿ ನೀಡಿದರು.
ಕ್ವಾರಂಟೈನ್ ನಲ್ಲಿರುವವರಿಗೆ ಅವಶ್ಯಕವಿದ್ದಲ್ಲಿ ಪಾವತಿಯ ಆಧಾರದಲ್ಲಿ ದಿನಸಿ ಪೂರೈಕೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.


ಗ್ರಾ.ಪಂ.ವ್ಯಾಪ್ತಿಯ ಸಾರ್ವಜನಿಕರಿಗೆ ಅವಶ್ಯವಿದ್ದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆಯಲು ಗ್ರಾ .ಪಂ. ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಸಹಕಾರ ನೀಡುವಂತೆ ಕೋರಲಾಯಿತು.


ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಕಾರ್ಯಪಡೆ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.