ಸುಳ್ಯ ತಾಲೂಕಿನ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಸಚಿವರು, ಸಂಸದರ ವೀಡಿಯೋ ಕಾನ್ಫರೆನ್ಸ್

Advt_Headding_Middle

ಕೊರೋನಾ ಸಮಸ್ಯೆಯ ವಿರುದ್ಧವಾಗಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳ ಪರಾಮರ್ಶೆಗಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುಳ್ಯ ಶಾಸಕರಾದ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್‌ರವರಿಂದು ಸುಳ್ಯ ತಾಲೂಕಿನ ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಒಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.

ವಿವಿಧ ಪಂಚಾಯತ್‌ಗಳು ಕೊರೊನಾ ವಿರುದ್ಧ ಹೋರಾಡಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒಗಳು ಹೇಳಿದ ಸಮಸ್ಯೆಗಳನ್ನು ಆಲಿಸಿದ ಸಚಿವರು ಮತ್ತು ಸಂಸದರು ಪರಿಹಾರದ ಭರವಸೆಯನ್ನು ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಜೊತೆಗಿದ್ದರು.

ಸಂಪಾಜೆ ಗ್ರಾ.ಪಂ. ಅದ್ಯಕ್ಷ ಜಿ.ಕೆ.ಹಮೀದ್‌ರವರು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿ ಗೂನಡ್ಕ ಆರೋಗ್ಯ ಸಹಾಯಕ ಕೇಂದ್ರದ ಸಮಸ್ಯೆಯನ್ನು, ಸಂಪಾಜೆ ಗ್ರಾಮಕ್ಕೆ ಆರೋಗ್ಯ ಸಹಾಯಕಿಯರ ನೇಮಕದ ಸಮಸ್ಯೆಯನ್ನು, ಪಡಿತರ ವಿತರಣೆ ಸಂದರ್ಭ ತಂಬ್ ಮತ್ತು ಓಟಿಪಿಗಳ ಗೊಂದಲವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಸಮಸ್ಯೆಗಳ ನಿವಾರಣೆಗೆ ಪಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.