ಕನಕಮಜಲು ಗ್ರಾ.ಪಂ. ವ್ಯಾಪ್ತಿಯ ವಸತಿಯೋಜನೆ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೆ ಗ್ರಾ.ಪಂ. ಅಧ್ಯಕ್ಷರ ಮನವಿ

Advt_Headding_Middle

ಕನಕಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಸತಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವಂತೆ ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಮನವಿ ಸಲ್ಲಿಸಿದ್ದಾರೆ.
ಮೇ.15ರಂದು ಮಂಗಳೂರಿನಲ್ಲಿ ನಡೆದ ಸುಳ್ಯ ತಾಲೂಕಿನ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಗ್ರಾ.ಪಂ‌. ಅಧ್ಯಕ್ಷರು ಕನಕಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು ಇಪ್ಪತ್ತು ಮಂದಿ ವಸತಿ ಯೋಜನೆಯ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದ್ದು, ಅವರಲ್ಲಿ ಹೆಚ್ಚಿನವರ ವಸತಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಸದ್ಯ ಕೊರೊನಾ ಲಾಕ್ ಡೌನ್ ಕಾರಣದಿಂದ ಅನುದಾನ ಬರುತ್ತಿಲ್ಲ. ವಸತಿ ಯೋಜನೆಯ ಫೋಟೋ ತೆಗೆದು ಹಂತ ಹಂತವಾಗಿ ಫಲಾನುಭವಿಗಳಿಗೆ ರಾಜ್ಯ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಿಸುವಂತೆ ದ.ಕ. ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಸೇರಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.