ಸಹಕಾರಿ ಸಂಘದ ಸಿಬ್ಬಂದಿಗಳನ್ನು ಕೊರೋನಾ ಫ್ರಂಟ್‌ಲೈನ್ ವಾರಿಯರ್‍ಸ್ ಆಗಿ ಪರಿಗಣಿಸಲು ಸುಳ್ಯ ಸಹಕಾರಿ ಯೂನಿಯನ್ ಮನವಿ

Advt_Headding_Middle

ಸಹಕಾರಿ ಸಂಘದ ಸಿಬ್ಬಂದಿಗಳನ್ನು ಕೊರೋನಾ ಫ್ರಂಟ್‌ಲೈನ್ ವಾರಿಯರ್‍ಸ್ ಎಂದು ಪರಿಗಣಿಸಿ ಆದ್ಯತಾ ನೆಲೆಯಲ್ಲಿ ವ್ಯಾಕ್ಸಿನೇಷನ್ ನೀಡುವಂತೆ ಮತ್ತು ವಿಮಾ ಭದ್ರತೆ ಒದಗಿಸಿಕೊಡಬೇಕೆಂದು ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಸುಳ್ಯ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.
ಇಂದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿಯವರನ್ನು ಭೇಟಿ ಮಾಡಿದ ಸುಳ್ಯ ತಾಲೂಕು ಸಹಕಾರಿ ಯೂನಿಯನ್‌ನ ಅಧ್ಯಕ್ಷ ರಮೇಶ್ ದೇಲಂಪಾಡಿ, ಅರಂತೋಡು ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್, ಸಹಕಾರಿ ಯೂನಿಯನ್ ನಿರ್ದೇಶಕರುಗಳಾದ ಶೈಲೇಶ್ ಅಂಬೆಕಲ್ಲು, ದಯಾನಂದ ಕುರುಂಜಿ, ಅರಂತೋಡು ತೊಡಿಕಾನ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಾಸುದೇವ ನಾಯಕ್ ಅಂಗಡಿಮಠ, ಸುಳ್ಯ ಸಿ.ಎ. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲರವರಿದ್ದ ನಿಯೋಗ ಮನವಿ ನೀಡಿತು.


ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ 2ನೇ ಅಲೆಯು ವಿಪರೀತವಾಗಿದೆ. ಇದನ್ನು ಸಮರ್ಥವಾಗಿ ಎದುರಿಸಲು ತಾಲೂಕಿನ ಸಹಕಾರ ಸಂಘಗಳು ಸರಕಾರದ ಸೂಚನೆ, ಆದೇಶಗಳನ್ನು ಪಾಲಿಸುತ್ತಿದ್ದಾರೆ. ಸಂಘಗಳು ಗ್ರಾಹಕ ಸ್ನೇಹಿ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಜೊತೆಗೆ ಸರಕಾರದ ಅನ್ನಭಾಗ್ಯ ಪಡಿತರ ವಿತರಣೆಯನ್ನು ಸರಕಾರದ ನಿಯಮಾನುಸಾರ ವಿತರಿಸುತ್ತಿದೆ. ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು, ಸರಕಾರದ ಜೊತೆಯಲ್ಲಿ ಹೆಜ್ಜೆ ಹಾಕಿ ಜನಸಾಮಾನ್ಯರುಗಳಿಗೆ ಸೇವೆಯನ್ನು ನೀಡುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುವವರಿಗೆ ನೆರವಾಗುವುದರ ಮೂಲಕ ಸಹಕಾರಿಗಳಿಗೆ ಮತ್ತು ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ಮತ್ತು ಸಂಕಷ್ಟದ ಸಮಯದಲ್ಲಿ ನೆರವಾಗುವ ದೃಷ್ಟಿಯಿಂದ ಅಲ್ಲದೆ ಪಡಿತರವನ್ನು ಮನೆಮನೆಗೆ ತಲುಪಿಸುವ ಮೂಲಕ ಸಹಕಾರ ಸಂಘದ ಸಿಬ್ಬಂದಿಗಳು ಸಾವಿರಾರು ಸಾರ್ವಜನಿಕರನ್ನು ನೇರವಾಗಿ ಸಂಪರ್ಕಿಸುತ್ತಿದ್ದಾರೆ.
ಸಹಕಾರಿ ಸಂಘದ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಯಾವುದೇ ಜೀವನ ಭದ್ರತೆಗಳು ಇಲ್ಲ. ಆದ್ದರಿಂದ ಸಹಕಾರಿ ಸಂಘಗಳ ಸಿಬ್ಬಂದಿಗಳನ್ನು ಕೊರೋನಾ ಫ್ರಂಟ್‌ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತಾ ನೆಲೆಯಲ್ಲಿ ವ್ಯಾಕ್ಸಿನೇಷನ್ ನೀಡಬೇಕು ಮತ್ತು ವಿಮಾ ಭದ್ರತೆ ಸಂಘದ ಸಿಬ್ಬಂದಿಗಳಿಗೆ ಒದಗಿಸಿಕೊಡಬೇಕಾಗಿ ಸಹಕಾರಿ ಯೂನಿಯನ್ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.