Breaking News

ಐವರ್ನಾಡು ಸಹಕಾರಿ ಸಂಘದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಆಹಾರ ಸಾಮಾಗ್ರಿ ವಿತರಣೆ

Advt_Headding_Middle

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಆಹಾರ ಸಾಮಾಗ್ರಿ ವಿತರಣೆಯು ಮೇ.21 ರಂದು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಯವರು ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಆಹಾರದ ಕಿಟ್ ಹಾಗೂ ಧನಸಹಾಯ ನೀಡಿದರು.


ಕೊರೊನಾ ಸಂದರ್ಭದಲ್ಲಿ ಮನೆ ಮನೆಗೆ ಭೇಟಿ ನೀಡಿ ಕಷ್ಟಪಟ್ಟು ದುಡಿಯುವ ಆಶಾ ಕಾರ್ಯಕರ್ತೆಯರಿಗೆ ನೆರವಾಗುವ ದೃಷ್ಟಿಯಲ್ಲಿ ಸಹಕಾರಿ ಸಂಘದಿಂದ ಪಲ್ಸ್ ಆಕ್ಸಿಮೀಟರ್ ಮತ್ತು ಆಹಾರದ ಕಿಟ್ಟನ್ನು ವಿತರಿಸುತ್ತಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಹೇಳಿದರು.


ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು,ಸಂಘದ ನಿರ್ದೇಶಕ ಕುಸುಮಾಧರ ಮಡ್ತಿಲ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಸತೀಶ ಎಡಮಲೆ,ಮಹೇಶ ಜಬಳೆ,ಕೃಷ್ಣ ಬೆಳ್ಚಪ್ಪಾಡ,ಚಂದ್ರಶೇಖರ ಎಸ್.,ವಾಸುದೇವ ಬಿ.ಕೆ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ, ಮಾಧವ ಭಟ್ ಶೃಂಗೇರಿ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ .ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.