ಚೆಂಬು ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಪೋರ್ಸ್ ಸಭೆ

Advt_Headding_Middle

 

ಚೆಂಬು ಗ್ರಾಮ ಪಂಚಾಯತ್ ನಲ್ಲಿ ಕೊರೋನಾ ಟಾಸ್ಕ್ ಫೋರ್ಸ್ ಸಭೆ ಮತ್ತು ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಯೋಜನೆಯಡಿಯಲ್ಲಿ ಸಂಬಂಧಪಟ್ಟ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು.
ವಿಪತ್ತು ನಿರ್ವಹಣಾ ಸಮಿತಿ, ಮುನ್ನೆಚ್ಚರಿಕೆ ಮಾಹಿತಿ ಸಮಿತಿ, ಶೋಧನೆ ಮತ್ತು ಸ್ಥಳಾಂತರ ರಕ್ಷಣಾ ಕ್ರಿಯಾಸಮಿತಿ, ವೈದ್ಯಕೀಯ ಮತ್ತು ಪ್ರಥಮ ಚಿಕಿತ್ಸಾ ತಂಡ, ವಸತಿ ನಿರ್ವಹಣಾ ಸಮಿತಿ ಪ್ರಾಣಿ ಸಂರಕ್ಷಣೆ ಮತ್ತು ಮೃತದೇಹ ವಿಲೇವಾರಿ ಸಮಿತಿ ಹಾನಿ ಮತ್ತು ಅಗತ್ಯ ಮೌಲ್ಯಮಾಪನ ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸಮಿತಿ ಅಧ್ಯಕ್ಷರಾಗಿ ಹಾಗೂ ಸಮಿತಿಯಲ್ಲಿ ಪೋಲಿಸ್ ಸಬ್ ಇನ್ಸ್ಪೆಕ್ಟರ್, ದಾದಿಯರು, ಆಶಾ ಕಾರ್ಯಕರ್ತೆಯರು, ಪ್ರತಿ ವಾರ್ಡ್ ನಿಂದ ತಲಾ ಒಬ್ಬರು ಪಂಚಾಯತ್ ಸದಸ್ಯರು, ಕೃಷಿ ಇಲಾಖೆಯ ಅಧಿಕಾರಿ, ಕಂದಾಯ ಇಲಾಖೆಯ ಓರ್ವ ಅಧಿಕಾರಿ ಮತ್ತು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ರನ್ನು ಆಯ್ಕೆ ಮಾಡಲಾಯಿತು.
ಕಾರ್ಯವೈಖರಿ ರೂಪುರೇಷೆಗಳ ಬಗ್ಗೆ ಅಭಿವೃದ್ಧಿ ಅಧಿಕಾರಿ ಎಸ್. ಜಿ. ಕುಮಾರ್ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಸುಮ ಅಧ್ಯಕ್ಷತೆ ವಹಿಸಿದ್ದರು. ಉದ್ಭವ ಟ್ರಸ್ಟ್ ನ ಮಲ್ಲಿಕಾರ್ಜುನರವರು ಆರೋಗ್ಯ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕತೆಯರು, ಪಂಚಾಯತ್ ಸದಸ್ಯರುಗಳು ಮತ್ತು ಸಾರ್ವಜನಿಕರು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.