Breaking News

ರಾಜ್ಯದಲ್ಲಿ ಅವೈಜ್ಞಾನಿಕ ಲಾಕ್ ಡೌನ್, ನಿಷ್ಪ್ರಯೋಜಕ ಪ್ಯಾಕೇಜ್

Advt_Headding_Middle

 

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್

ರಾಜ್ಯದಲ್ಲಿ ಜಾರಿ‌‌ ಮಾಡಿರುವ ಲಾಕ್ ಡೌನ್ ಅವೈಜ್ಞಾನಿಕವಾಗಿದೆ ಮತ್ತು ಸರಕಾರ ಘೋಷಣೆ ಮಾಡಿರುವ ಪ್ಯಾಕೇಜ್ ನಿಷ್ಪ್ರಯೋಜಕ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಇಂದು ಸುಳ್ಯ ಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್ ಡೌನ್ ನಲ್ಲಿ ಕೆಲವು ವಸ್ತುಗಳ ಮಾರಾಟಕ್ಕೆ ಒಂದೊಂದು ಸಮಯ ನೀಡುವ ಮೂಲಕ ಗೊಂದಲ ಉಂಟು ಮಾಡಿದೆ. ನಿರ್ಧಿಷ್ಟ ಸಮಯ ನೀಡಬೇಕು. ಅಲ್ಲದೆ ಈಗ ಸರಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದ್ದು ಇದರಿಂದ ಯಾರಿಗೂ ಯಾವುದೇ ಪ್ರಯೋಜನ ಇಲ್ಲ. ಕಳೆದ ವರ್ಷ ಘೋಷಿಸಿದ ಪ್ಯಾಕೇಜ್ ನ ಹಣವನ್ನು ಇನ್ನೂ ನೀಡಿಲ್ಲ. ಕನಿಷ್ಟ 10 ಸಾವಿರ ಆದರೂ ಸಹಾಯ ನೀಡಬೇಕು ಎಂದು ಅವರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಮಾತನಾಡಿ ಸುಳ್ಯ ಬ್ಲಾಕ್ ನಲ್ಲಿ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೆ ಕೊರೊನಾ ರೋಗಿಗಳನ್ನು ಸಾಗಿಸಲು ಅಂಬ್ಯುಲೆನ್ಸ್ ಸೇವೆ ಮಾಡುತ್ತಿದ್ದೇವೆ ಎಂದು‌ ಹೇಳಿದ ಅವರು ಸಹಕಾರಿ ಸಂಘದ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಗಳೆಂದು ಸರಕಾರ ಘೋಷಿಸಬೇಕು.‌ಅವರಿಗೆ ಆದ್ಯತೆಯಲ್ಲಿ ಲಸಿಕೆ ಹಾಗೂ ಇನ್ನಿತರ ಸೌಲಭ್ಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.