ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆದಿತ್ಯ ಬೆಳ್ಳಾರೆಗೆ ಶ್ರದ್ಧಾಂಜಲಿ

Advt_Headding_Middle

 

 

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಅಂತರಾಷ್ಟ್ರೀಯ ಮಟ್ಟದ ಯೋಗಪಟು ಆದಿತ್ಯ ಬೆಳ್ಳಾರೆಯವರು ಕೊರೊನಾಕ್ಕೆ ಬಲಿಯಾಗಿದ್ದು ಅವರಿಗೆ ಶ್ರದ್ಧಾಂಜಲಿ ಸಭೆಯು ಮೇ.27 ರಂದು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲುರವರು ಮಾತನಾಡಿ ನಮ್ಮ ಸಂಘದ ಉದ್ಯೋಗಿ ಆದಿತ್ಯ ಬೆಳ್ಳಾರೆಯವರು ಅಕಾಲಿಕವಾಗಿ ನಮ್ಮನ್ನಗಲಿದ್ದಾರೆ.
ಸರಳ, ಸಜ್ಜನಿಕೆಯ ವ್ಯಕ್ತಿತ್ವದಿಂದ ಎಲ್ಲರೊಂದಿಗೆ ಬೆರೆಯುತ್ತಿದ್ದರು.ಸಂಘದಲ್ಲಿ ಹಲವು ವರ್ಷಗಳಿಂದ ದುಡಿದು ಸಂಘದ ಏಳಿಗೆಗೆ ಕಾರಣರಾಗಿದ್ದರು ಎಂದು ಹೇಳಿ
ಅವರ ಆದರ್ಶ ಗುಣಗಳ ಬಗ್ಗೆ ನೆನಪಿಸಿ ನುಡಿನಮನ ಸಲ್ಲಿಸಿದರು.
ಸಂಘದ ನಿರ್ದೇಶಕರಾದ ಕರುಣಾಕರ ಆಳ್ವ, ಶ್ರೀರಾಮ ಪಾಟಾಜೆ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವ, ಡಿ.ಸಿ.ಸಿ.ಬ್ಯಾಂಕ್ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ ರವರು ನುಡಿನಮನ ಸಲ್ಲಿಸಿದರು.
ಬಳಿಕ ಆದಿತ್ಯ ಬೆಳ್ಳಾರೆಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಮಾನ್, ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.