ಪೈಚಾರು-ಸೋಣಂಗೇರಿ ನೂತನ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ

Advt_Headding_Middle

 

ಲೋಕೋಪಯೋಗಿ ಇಲಾಖೆಯ ವತಿಯಿಂದ ಪೈಚಾರು-ಸೋಣಂಗೇರಿ ರಸ್ತೆ ಕಾಮಗಾರಿ ನಡೆದು ಡಾಮರೀಕರಣ ಕಾಮಗಾರಿ ನಡೆಯುತ್ತಿದ್ದು, ವಿದ್ಯುತ್ ಕಂಬವೊಂದು ಮುಖ್ಯ ರಸ್ತೆಯ ಬದಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದೆ.
ಪೈಚಾರು-ಸೋಣಂಗೇರಿ ಮುಖ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ವಿದ್ಯುತ್ ಕಂಬವೊಂದಿದ್ದು, ಇದರ ಸುತ್ತ ಡಾಮರೀಕರಣ ಮಾಡಲಾಗಿದೆ. ಆದರೆ ಇದು ಡಾಮರು ರಸ್ತೆಯಲ್ಲಿದ್ದು, ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಘನ ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿದೆ.
ರಸ್ತೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಈ ವಿದ್ಯುತ್ ಕಂಬವನ್ನು ಅಲ್ಲಿಂದ ತೆರವುಗೊಳಿಸುವಂತೆ ಗ್ರಾ.ಪಂ. ಸದಸ್ಯ ಮುಜೀಬ್ ಪೈಚಾರು ಸೇರಿದಂತೆ ಸ್ಥಳೀಯ ನಿವಾಸಿಗಳು ಮೆಸ್ಕಾಂ ಇಲಾಖೆಗೆ ತಿಳಿಸಿದ್ದರೂ ಇಲಾಖೆ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೇ ಇದ್ದುದರಿಂದ ಇದೀಗ ವಿದ್ಯುತ್ ಕಂಬ ಅಪಾಯವನ್ನು ಆಹ್ವಾನಿಸುತ್ತಿದೆ. ಮೆಸ್ಕಾಂ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ.

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.