ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

Advt_Headding_Middle

 

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ರಾಜೇಂದ್ರ ಕೆ ವಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶ್ರೀಕುಮಾರರವರು ಇಂದು ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕಾರಿಗಳು ಮತ್ತು ಆರೋಗ್ಯ ಸಹಾಯಕಿಯರು ಆಶಾ ಕಾರ್ಯಕರ್ತೆಯರ ಸಭೆಯನ್ನು ನಡೆಸಿದರು. ಕೊರೋಣ ಪಾಸಿಟಿವ್ ಹೊಂದಿರುವವರ ಮೇಲೆ ಯಾವ ರೀತಿ ನಿಗಾವಹಿಸಬೇಕು, ಸೂಕ್ತ ಸಮಯದಲ್ಲಿ ಯಾವ ರೀತಿ ಆನ್ ಲೈನ್ ನಲ್ಲಿ ಇ೦ದಿಕರಿಸಬೇಕು , ಆಡಳಿತಾತ್ಮಕವಾಗಿ ಕೊರೋನ ನಿಯಂತ್ರಣ ಹೇಗೆ ಸಾಧಿಸಬೇಕು ಎಂಬ ವಿಚಾರದ ಕುರಿತು ಮಾಹಿತಿಯನ್ನು ನೀಡಿದರು. ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಆಗಿ ಐಸೋಲೇಶನ್ ನಲ್ಲಿರುವ ಮನೆಗೆ ಭೇಟಿ ನೀಡಿ ಐಸೋಲೇಷನ್ ನಲ್ಲಿದ್ದವರಿಗೆ ಧೈರ್ಯ ತುಂಬಿದರು. ಮತ್ತು Quarantine watch app ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿದರು. ಅಡ್ಯಡ್ಕ ಸಿಆರ್ ಸಿ ಕಾಲನಿಗೆ ವಿಶೇಷವಾಗಿ ಭೇಟಿನೀಡಿ 74 ಮನೆಗಳ ಆರೋಗ್ಯದ ಕಾಳಜಿಯನ್ನು KFDC ವೈದ್ಯಾಧಿಕಾರಿಗಳು ಕೈಗೊಳ್ಳುವಂತೆ ಕ್ರಮ ವಹಿಸಲು ತಹಶೀಲ್ದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಸುಳ್ಯ ತಾಲ್ಲೂಕು ತಹಶೀಲ್ದಾರ್ ಅನಿತಾಲಕ್ಷ್ಮಿ, ತಾಲ್ಲೂಕು ವೈದ್ಯಾಧಿಕಾರಿಗಳಾದ ನಂದಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ರಿಜ್ವಾನ್, ಗ್ರಾಮ ಲೆಕ್ಕಾಧಿಕಾರಿ ಮಿಯಾ ಸಾಬ್ , ಮುಂತಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.