“ಲಂಚ ಕೊಡಿ, ಗಾಡಿ ಬಿಡ್ತೀನಿ” ಎಂದ ಉಪ ವಲಯ ಅರಣ್ಯಾಧಿಕಾರಿ ಅಮಾನತು

Advt_Headding_Middle

ಸಂಪಾಜೆ ವಲಯ ದಬ್ಬಡ್ಕ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಕ್ಷಿತ್ ಅವರನ್ನು ಲಾರಿ ಚಾಲಕರಿಂದ ಲಂಚ ಸ್ವೀಕಾರದ ಆರೋಪದ ಮೇರೆಗೆ ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿಯವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಮೇ. 24ರಂದು ತನಿಖಾ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ರಕ್ಷಿತ್ ಅವರು ಲಾರಿ ಚಾಲಕನಿಂದ ಲಂಚಕ್ಕೆ ಬೇಡಿಕೆಯಿಟ್ಟು ಹಣವನ್ನು ಪಡೆದುಕೊಂಡಿದ್ದನ್ನು ಸ್ವತಃ ಲಾರಿ ಚಾಲಕನೇ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ. ಈ ವೀಡಿಯೋ “ಕ್ಯೂಟ್ ಕೂರ್ಗ್ ನ್ಯೂಸ್” ನ ಎಲ್ಲಾ ಗ್ರೂಪ್ ಗಳಲ್ಲಿ ಭಿತ್ತರವಾಗುತ್ತಿದ್ದಂತೆಯೇ ಶರವೇಗದಲ್ಲಿ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ತನಿಖೆ ನಡೆದು ಕರ್ತವ್ಯ ನಿರ್ಲಕ್ಷ್ಯ, ನಂಬಿಕೆ ದ್ರೋಹ ಹಾಗೂ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸಲು ವಿಫಲತೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.