ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾಗಿ ಕುಂದಲ್ಪಾಡಿ ದಿವಾಕರ್ ನೇಮಕ

Advt_Headding_Middle

ಮಡಿಕೇರಿ ತಾಲ್ಲೂಕು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಮಡಿಕೇರಿ ಯ ಹೊಸಬಡಾವಣೆಯಲ್ಲಿ ನೆಲೆಸಿರುವ ಪೆರಾಜೆ ಗ್ರಾಮದ ಕುಂದಲ್ಪಾಡಿ ದಿವಾಕರ್ ರವರು ಇಂದು ಅಧಿಕಾರ ವಹಿಸಿಕೊಂಡರು. 1990ರ ಜೂನ್ ತಿಂಗಳಿಂದ ಉಪನ್ಯಾಸಕರಾಗಿ ಸೇವೆ ಪ್ರಾರಂಭಿಸಿ ಸುಮಾರು 31 ವರ್ಷಗಳ ಸೇವಾ ಅನುಭವ ಹೊಂದಿರುವ ಇವರನ್ನು ಸೇವಾ ಹಿರಿತನದ ಆಧಾರದಲ್ಲಿ ನೇಮಿಸಲಾಗಿದೆ.

 

ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೆರಾಜೆಯಲ್ಲಿ ಪ್ರೌಢ ಶಿಕ್ಷಣವನ್ನು ಸಂಪಾಜೆ ಪ್ರೌಢಶಾಲೆಯಲ್ಲಿ, ಪಿ ಯು ಸಿ ಮತ್ತು ಪದವಿ ಶಿಕ್ಷಣವನ್ನು ನೆಹರೂ ಸ್ಮಾರಕ ಕಾಲೇಜ್ ಸುಳ್ಯ, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪಡೆದರು. ದ್ವಿತೀಯ ಪಿಯುಸಿ ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರಾಗಿ ಎರಡುಬಾರಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿದ ಇ-ಪಠ್ಯ DIKSHA ವೇದಿಕೆಯ ಅರ್ಥಶಾಸ್ತ್ರ ವಿಭಾಗದ SME ಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೊಡಗು ಜಿಲ್ಲೆಯ ಚುನಾವಣಾ ತರಬೇತುದಾರರಾಗಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.