ಸುಬ್ರಹ್ಮಣ್ಯ : ವಿ.ಹಿಂ.ಪ. ವತಿಯಿಂದ ಆಹಾರ ಸಾಮಾಗ್ರಿ ವಿತರಣೆ

Advt_Headding_Middle

 

ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಬೆಳ್ತಂಗಡಿ ಸಹಯೋಗದಲ್ಲಿ ಸುಬ್ರಹ್ಮಣ್ಯದ ವಿ.ಹಿಂ.ಪ ವತಿಯಿಂದ ಸುಬ್ರಹ್ಮಣ್ಯದಲ್ಲಿ ಆಹಾರ ಕಿಟ್ ವಿತರಿಸಲಾಯಿತು . ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದ ವತಿಯಿಂದ ಕಿಟ್ ಗಳ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ಸುಬ್ರಹ್ಮಣ್ಯದ ಆಶಾ ಕಾರ್ಯಕರ್ತೆಯರಿಗೆ ಮತ್ತು ಸುಬ್ರಹ್ಮಣ್ಯ ಗ್ರಾ.ಪಂ.ನ ಅತಿ ಬಡವರಿಗೆ ಇದನ್ನು ವಿತರಿಸಲಾಯಿತು.

ಸುಬ್ರಹ್ಮಣ್ಯ ವಿ.ಹಿಂ.ಪ ಘಟಕದ ಮುಖಾಂತರದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಮನೆಮನೆಗೆ ತೆರಳಿ ವಿತರಿಸಲಾಯಿತು. ಈ ಸಂಧರ್ಭದಲ್ಲಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನ ಅಧ್ಯಕ್ಷ ಡಾ| ಎಂ.ದಯಾಕರ್ , ವಿಶ್ವ ಹಿಂದೂ ಪರಿಷತ್ ನ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ವಿ.ಹಿಂ.ಪ ಬೆಳ್ತಂಗಡಿ ಉಪಾಧ್ಯಕ್ಷ ಶ್ರೀನಿವಾಸ್ ಗುಡಿಗಾರ್ ವಿ.ಹಿಂ.ಪ. ಸುಬ್ರಹ್ಮಣ್ಯ ಅಧ್ಯಕ್ಷರಾದ ಅಶೋಕ್ ಆಚಾರ್ಯ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಶ್ರೀಮತಿ ದಿವ್ಯಾ , ಕಡಬ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಗಣೇಶ್ ಗುಂಡ್ಯ, ಪ್ರಸಾದ್ ರೈ , ದಿವಿನ್ ಭಟ್ , ಹರೀಶ, ಸುನಿಲ್, ಕಾರ್ತಿಕ್, ಬಾಲಣ್ಣ ಕೈಕಂಬ, ರಾಧಣ್ಣ, ರಾಮಚಂದ್ರ, ಯಶೋದಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.