ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

Advt_Headding_Middle

 

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಕೋವಿಡ್ 19 ರ ಹಿನ್ನಲೆಯಲ್ಲಿ ಲಾಕ್ ಡೌನ್ ಇರುವ ಕಾರಣ ಸರಳ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಿ, ಗಿಡ ನೆಡುವ ಮೂಲಕ ಪರಿಸರ ಪ್ರೇಮದ ಜಾಗೃತಿಯನ್ನು ಮೂಡಿಸಿದ್ದೇವೆ.

ಮುಂದಿನ ದಿನಗಳಲ್ಲಿ ನಗರ ಪಂಚಾಯತ್ ಪರಿಸರ ಮತ್ತು ನಗರದಾದ್ಯಂತ ಗಿಡಗಳನ್ನು ಬೆಳೆಸುವ ಯೋಜನೆಯನ್ನು ರೂಪಿಸಿದ್ದೇವೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದಿಂದ ಮುಂದಿನ ದಿನಗಳಲ್ಲಿ ಈ ಕಾರ್ಯಗಳನ್ನು ಮಾಡಲಿದ್ದೇವೆ ಎಂದು ಹೇಳಿದರು.

ನಗರ ಪಂಚಾಯತ್ ಮುಖ್ಯ ಅಧಿಕಾರಿ ಎಂ ಆರ್ ಸ್ವಾಮಿ, ಆರೋಗ್ಯ ಅಧಿಕಾರಿ ಲಿಂಗರಾಜು ವಿಶ್ವ ಪರಿಸರ ದಿನಾಚರಣೆಯ ಮಾತನಾಡಿ ಶುಭ ಹಾರೈಸಿದರು.

 ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ಧ ನಾಯ್ಕ, ನಗರ ಪಂಚಾಯತ್ ಸದಸ್ಯರುಗಳಾದ ಸುಧಾಕರ್, ಡೇವಿಡ್ ಧೀರಾ ಕ್ರಾಸ್ತ, ಶಶಿಕಲಾ ನೀರಬಿದಿರೆ , ಹಾಗೂ ನಗರ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.