Breaking News

ಆಲೆಟ್ಟಿ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advt_Headding_Middle

 

 

ಆಲೆಟ್ಟಿ ಗ್ರಾಮ ಪಂಚಾಯತ್ ಮತ್ತು ಸಾಮಾಜಿಕ ಅರಣ್ಯ ವಲಯ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯು ಜೂ.5 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾಗಪಟ್ಟಣದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು .ಈ ಸಂದರ್ಭ ಇಲಾಖೆಯ ವತಿಯಿಂದ ಎಲ್ಲರಿಗೂ ಗಿಡ ವಿತರಿಸಲಾಯಿತು.
ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಭವಾನಿಶಂಕರ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಆನಂದ, ಲಯನ್ಸ್ ಕ್ಲಬ್ ನ ಪ್ರಾಂತೀಯ ಮಾಜಿ ಅಧ್ಯಕ್ಷ ಲ|ಜಯರಾಮ ದೇರಪ್ಪಜ್ಜನಮನೆ, ನಿಯೋಜಿತ ಅಧ್ಯಕ್ಷ ಲ| ಆನಂದ ಪೂಜಾರಿ ಸುಳ್ಯ, ಲ|ರಾಮಕೃಷ್ಣ ರೈ ಸುಳ್ಯ, ಪಂ.ಪಿ.ಡಿ.ಒ. ಗಳಾದ ಕೀರ್ತಿಪ್ರಸಾದ್, ಪುರುಷೋತ್ತಮ ಗೌಡ ಮಣಿಯಾನ, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎಂ, ಪಂಚಾಯತ್ ಸದಸ್ಯರು,ಶಿಕ್ಷಕರು, ಇಲಾಖೆಯ ಸಿಬ್ಬಂದಿ ವರ್ಗದವರು, ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.