Breaking News

ನಳಿನಾಕ್ಷಿ ಬಾಳೆಕೋಡಿ ನಿಧನ

Advt_Headding_Middle

 

ಕನಕಮಜಲು ಸಮೀಪದ ಕಾಸರಗೋಡು ತಾಲೂಕು ದೇಲಂಪಾಡಿ ಗ್ರಾಮದ ಬಾಳೆಕೋಡಿ ದಿ. ಪಾವನಕೃಷ್ಣ ಅವರ ಧರ್ಮಪತ್ನಿ ಶ್ರೀಮತಿ ನಳಿನಾಕ್ಷಿ ಅವರು ಅಸೌಖ್ಯದಿಂದಾಗಿ ಜೂ.7ರಂದು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.
ಜ್ವರದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಾಗಿದ್ದ ನಳಿನಾಕ್ಷಿ ಅವರಿಗೆ ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ನಾಲ್ಕು ದಿನದ ಹಿಂದೆ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತೆನ್ನಲಾಗಿದೆ. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ ‌.
ಮೃತರು ಪುತ್ರ ಗುರುಪ್ರಸಾದ್, ಪುತ್ರಿ ಶ್ರೀಮತಿ ಸುಪ್ರೀತ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಕೋವಿಡ್ ನಿಯಮದಂತೆ ಇಂದು ಅವರ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.