ಸುಳ್ಯ ನಗರ ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಕೊರೋನಾ ಪರೀಕ್ಷೆ

Advt_Headding_Middle

 

 

ಕಳೆದ ಎರಡು ದಿನಗಳ ಹಿಂದೆ ಸುಳ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ತುರ್ತು ಸಭೆ ನಡೆಸಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಯನ್ನು ನಿಯಂತ್ರಿಸಲು ಕಡ್ಡಾಯವಾಗಿ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಲೇಬೇಕೆಂದು ಸಲಹೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸುಳ್ಯ ನಗರ ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಕೊರೋನಾ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು ಸುಳ್ಯ ನಗರ ಪರಿಸರದ ನೂರಾರು ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ನ ಪಂ ಸದಸ್ಯರುಗಳಾದ ಶಿಲ್ಪಾ ಸುದೇವ, ರಿಯಾಜ್ ಕಟ್ಟೆ ಕಾರ್ಸ್, ಮುಖ್ಯ ಅಧಿಕಾರಿ ಎಂ ಆರ್ ಸ್ವಾಮಿ, ಆರೋಗ್ಯ ಅಧಿಕಾರಿ ಲಿಂಗರಾಜು, ನಗರ ಪಂಚಾಯತ್ ಸಿಬ್ಬಂದಿ ವರ್ಗದವರು, ಸುಳ್ಯ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಭಾರತಿ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.