ಲಾಕ್ ಡೌನ್ ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಗ್ಯಾರೇಜ್,ಕನ್ನಡಕ ಅಂಗಡಿ ಮಧ್ಯಾಹ್ನ 12ರವರೆಗೆ ತೆರೆಯಲು ಅವಕಾಶ

Advt_Headding_Middle

 

ಕೋವಿಡ್ ಸೋಂಕಿನ ಪ್ರಮಾಣವನ್ನು ಕಡಿಮೆಗೊಳಿಸುವ ಹಿನ್ನಲೆಯಲ್ಲಿ ಸರಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.21ರ ಮುಂಜಾನೆ 6 ಗಂಟೆಯವರೆಗೆ ಲಾಕ್‌ಡೌನ್ ಮುಂದುವರಿಯಲಿದೆ.

ಇದಕ್ಕಾಗಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಮುಂಜಾನೆ 6ರಿಂದ ಮಧ್ಯಾಹ್ನ 12ರವರೆಗೆ ವಾಹನ ಶೋ ರೂಂ ಹೊರತುಪಡಿಸಿ ಎಲ್ಲಾ ಗ್ಯಾರೇಜ್‌ಗಳು ಮತ್ತು ಅಧಿಕೃತ ವಾಹನ ಸೇವಾ ಕೇಂದ್ರಗಳನ್ನು ಮತ್ತು ಕನ್ನಡಕದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಈಗ ಇರುವ ಲಾಕ್ ಡೌನ್ ಮಾರ್ಗಸೂಚಿಗಳು ಯಥಾವತ್ತಾಗಿ
ಮುಂದುವರಿಯಲಿದೆ. ಯಾವುದೇ ಬದಲಾವಣೆ ಇಲ್ಲ. ಇತರ ಅಗತ್ಯ ವಸ್ತುಗಳ ಖರೀದಿಗೆ ಸಮಯ ಬೆಳಿಗ್ಗೆ 6ರಿಂದ 9ರ ವರೆಗೆ ಯಥಾವತ್ತಾಗಿ ಇರಲಿದೆ.. ವಾರಾಂತ್ಯದ ಕರ್ಫ್ಯೂ ಬಗ್ಗೆ ಯಾವುದೇ ಪ್ರತ್ಯೇಕ ನಿರ್ದೇಶನವಿರುವುದಿಲ್ಲ. ಸಾರ್ವಜನಿಕರು ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸಿ ಕೊರೋನ ಸೋಂಕು ತಡೆಗೆ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕು. ಈ ಸಂದರ್ಭ ಕೋವಿಡ್ -19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವಿನಂತಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.