ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್‌ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶ

Advt_Headding_Middle

ಐವತ್ತಕ್ಕಿಂತ ಹೆಚ್ಚು ಕೊರೋನಾ ಸಕ್ರಿಯ ಪ್ರಕರಣಗಳು ವರದಿಯಾಗಿರುವ ಹಿನ್ನಲೆಯಲ್ಲಿ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸೇರಿದಂತೆ ಜಿಲ್ಲೆಯ 17 ಗ್ರಾಮ ಪಂಚಾಯತ್‌ಗಳನ್ನು ಜೂ. 14 ರಿಂದ ಜೂ. 21ರವರೆಗೆ ಸೀಲ್‌ಡೌನ್ ಮಾಡಲು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.


ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿದಂತೆ ೫೦ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳು ವರದಿಯಾಗಿರುವ ಗ್ರಾಮಗಳು ಸೇರಿದಂತೆ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಗ್ರಾಮಗಳಲ್ಲಿ ಕಟ್ಟುನಿಟ್ಟಿನ ಸರ್ವೇಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ೫೦ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳು ವರದಿಯಾಗಿರುವ ಗ್ರಾಮಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸುವ ಬಗ್ಗೆ ಹಾಗೂ ಪ್ರಕರಣಗಳು ಏರಿಕೆಯಾಗುತ್ತಿರುವ ಗ್ರಾಮಗಳಲ್ಲಿ ಗ್ರಾ.ಪಂ. ಟಾಸ್ಕ್‌ಫೋರ್ಸ್‌ಗಳು ಲಾಕ್‌ಡೌನ್ ಘೋಷಿಸುವ ಬಗ್ಗೆ ನಿರ್ಣಯಿಸಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆ ಜಿಲ್ಲೆಯ 17 ಗ್ರಾ.ಪಂ.ಗಳಲ್ಲಿ ಜೂ. 14 ರಿಂದ ಜೂ. 21 ರವರೆಗೆ ಸೀಲ್‌ಡೌನ್ ಮಾಡುವಂತೆ ಶಿಫಾರಸ್ಸು ಸಲ್ಲಿಸಿದ್ದಾರೆ. ಇದನ್ನು ಆಧರಿಸಿ 7 ದಿನಗಳ ಕಾಲ ಈ ಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಮಾಡಲು ಆದೇಶಿಸಲಾಗಿದೆ.
ಈ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್ಸ್, ಕ್ಲಿನಿಕಲ್ ಲ್ಯಾಬ್, ಟೆಲಿ ಮೆಡಿಸಿನ್ ಸೌಲಭ್ಯಗಳು, ಔಷಧಾಲಯಗಳು, ಜನೌಷಧಿ ಕೇಂದ್ರಗಳು, ರಕ್ತ ಸಂಗ್ರಹ ಕೇಂದ್ರಗಳು ತೆರೆಯಲಿವೆ. ಕೆಎಂಎಫ್, ಹಾಲಿನ ಬೂತ್ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸೀಮಿತ ಅವಧಿಗೆ ಹಾಲಿನ ಸಂಗ್ರಹಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಪೆಟ್ರೋಲ್ ಬಂಕ್‌ಗಳು ಇದ್ದಲ್ಲಿ ಅವುಗಳ ಕಾರ್ಯಾಚರಣೆಗೆ ಅನುಮತಿಸಿದೆ. ಅಗತ್ಯ ತುರ್ತು ವೈದ್ಯಕೀಯ ಸೇವೆಯ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರುತ್ತದೆ.
ಈ ವಿನಾಯಿತಿಗಳನ್ನು ಹೊರತುಪಡಿಸಿ ಉಳಿದಂತೆ ಗ್ರಾಮಕ್ಕೆ ಒಳಪ್ರವೇಶ ಹಾಗೂ ನಿರ್ಗಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸಂಬಂಧಪಟ್ಟ ಗ್ರಾಮಪಂಚಾಯತ್ ಕಾರ್ಯಪಡೆಗಳಿಗೆ ಸೂಚಿಸಲಾಗಿದೆ. ಸೀಲ್‌ಡೌನ್ ಮಾಡಲಾದ ಗ್ರಾ.ಪಂ. ವ್ಯಾಪ್ತಿಯಲ್ಲಿ ಅವಶ್ಯಕತೆಯನ್ನು ಆಧರಿಸಿ ಪಾವತಿ ಆಧಾರದ ಮೇಲೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯನ್ನು ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕ್ರಮ ವಹಿಸುವಂತೆ ಸೂಚಿಸಲಾಗಿದೆ.

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.