ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಕಲ್ಲುಗುಂಡಿಯಲ್ಲಿ ಪ್ರತಿಭಟನೆ

Advt_Headding_Middle

ಕೇಂದ್ರ ಸರಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಕಲ್ಲುಗುಂಡಿ ಪೆಟ್ರೋಲ್ ಪಂಪ್ ಬಳಿ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಸೋಮಶೇಖರ ಕೊಯಿಂಗಾಜೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಾಹೀದ್ ತೆಕ್ಕಿಲ್ ಮಾತನಾಡಿ. ಪೆಟ್ರೊಲ್ ಡೀಸೆಲ್ ಬೆಲೆ ಹೇರಿಕೆಯಿಂದ ದಿನ ನಿತ್ಯ ಅಗತ್ಯ ವಸ್ತುಗಳ ಬೆಲೆ ಹೇರಿಕೆಯಾಗುತ್ತಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕೆಟ್ಟ ನೀತಿಗಳನ್ನು ಮತ್ತು ಜನ ವಿರೋಧಿ ನೀತಿಯಿಂದ ಬಡವರು ಸಂಕಷ್ಟದಲ್ಲಿದ್ದು ಆದಷ್ಟು ಬೇಗ ಬೆಲೆ ಇಳಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಕುಂಞ ಗೂನಡ್ಕ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಸಂಯೋಜಕ ತಾಜ್ ಮಹಮ್ಮದ್ ,ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲೆಸ್ಸಿ ಮೊನಾಲಿಸಾ,ಸದಸ್ಯರುಗಳಾದ ಪಿ ಕೆ ಅಬುಶಾಲಿ,ಸುಂದರಿ ಮುಂಡಡ್ಕ ,ಜಗದೀಶ್ ರೈ,ಎಸ್ ಕೆ ಹನೀಫ,ಕೆಪಿಸಿಸಿ ಫ್ಯಾನಲಿಸ್ಟ್ ಶವಾದ್ ಗೂನಡ್ಕ ಮತ್ತು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಪ್ರದಾನ ಕಾರ್ಯದರ್ಶಿ ರಿಯಾಜ್,ಸಾಮಾಜಿಕ ಜಾಲತಾಣದ ಕೊಡುಗು ಜಿಲ್ಲಾ ಅಧ್ಯಕ್ಷ ಸೂರಜ್ ಹುಸೂರು,ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎ ಕೆ ಇಬ್ರಾಹಿಂ,ಅಜರುದ್ದೀನ್ ಗೂನಡ್ಕ,ರಹೀಮ್ ಬೀಜದಕಟ್ಟೆ,ಅಯ್ಯುಬ್ ಗೂನಡ್ಕ,ಕಾಂತಿ ಮೋಹನ್,ನಿಜಾಮ್ ಕಲ್ಲುಗುಂಡಿ ,ಉಪಸ್ಥಿತರಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ಸ್ವಾಗತಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.